ಮೈಸೂರು,ಜೂ,23,2020(www.justkannada.in): ವೈನ್ ಸ್ಟೋರ್ ಹಾಗೂ ಬಾರ್ ತೆರವುಗೊಳಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಕ್ಯಾತಮಾರನಹಳ್ಳಿಯ ಟೆಂಟ್ ಸರ್ಕಲ್ ನಲ್ಲಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿ ವೈನ್ ಸ್ಟೋರ್ ಹಾಗೂ ಬಾರ್ ತೆರವುಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಾರ್ಡ್ ನಂ 30, 31 ಹಾಗೂ 32 ನೇ ವಾರ್ಡಿನ ನೂರಾರು ಸ್ಥಳೀಯ ನಿವಾಸಿಗಳು ಭಾಗಿಯಾಗಿ ಬಾರ್ ಮುಚ್ಚುವಂತೆ ಆಗ್ರಹಿಸಿ ಭಿತಿಪತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಮದ್ಯ ಮಾರಾಟದ ಬಳಿಕ ಈ ಭಾಗದಲ್ಲಿ ಸಾಕಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಲಾಕ್ಡೌನ್ ಸಡಿಲಿಕೆಯಾದ ಮೇಲೆ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಸ್ಟೋರ್ ತೆರೆದು ವ್ಯಾಪಾರ ಶುರು ಮಾಡಿದ ನಂತರ ಸಾಕಷ್ಟು ಸಮಸ್ಯೆ ಉಂಟಾಗಿದೆ. ಈ ಹಿಂದೆ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಈ ಕೊಡಲೇ ಬಾರ್ ಗಳನ್ನು ತೆರವುಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
Key words: bandh-wine store – bar-mysore- protest.






