ದೆಹಲಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ: ಸಾರ್ವಜನಿಕರಿಗೆ ತೊಂದರೆಯಾಗದಂತೆ ನಾಳೆ ಪ್ರತಿಭಟನೆ ನಡೆಸಲು ಐಕ್ಯ ಹೋರಾಟ ಸಮಿತಿ ನಿರ್ಧಾರ…

ಬೆಂಗಳೂರು,ಡಿಸೆಂಬರ್,15,2020(www.justkannada.in):  ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ರಾಜ್ಯ ರೈತ ಮುಖಂಡರು ನೈತಿಕ ಬೆಂಬಲ ನೀಡಿದ್ದು, ನಾಳೆ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲು ರೈತ, ಕಾರ್ಮಿಕ, ದಲಿತ ಸಂಘಟನೆಗಳು ನಿರ್ಧರಿಸಿವೆ.I didn't knew CM BSY will think so cheaply - KPCC President D.K. Shivakumar

ದೆಹಲಿ ರೈತರ ಹೋರಾಟ ಬೆಂಬಲಿಸಿ ಐಕ್ಯ ಹೋರಾಟ ಸಮಿತಿ ವತಿಯಿಂದ ನಾಳೆ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ.  ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಾಳಿನ ಪ್ರತಿಭಟನೆಗೆ ಬೆಂಬಲ ಸಲುವಾಗಿ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆ ಬಳಿಕ ಪ್ರತಿಭಟನೆ ರೂಪುರೇಷೆ ಕುರಿತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್  ಮಾಹಿತಿ ನೀಡಿದರು. ದೆಹಲಿಯಲ್ಲಿ ರೈತರ ಪ್ರತಿಭಟನೆ ಬೆಂಬಲಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯಲಿದೆ.  ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಐಕ್ಯ ಹೋರಾಟ ಸಮಿತಿ ನಿರ್ಧಾರ ಮಾಡಲಾಗಿದೆ.bangalire-support-delhi-farmer-protest-karnataka-decision-unity-fighting-committee

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ನಂತರ ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ  ಮಾಡುವಂತೆ ಆಗ್ರಹಿಸಿ ನಾಲ್ಕು ದಿನಗಳ  ಕಾಲ ಸಾರಿಗೆ ನೌಕರರು ಧರಣಿ ನಡೆಸಿದ್ದರು. ಸಾಲು ಸಾಲು ಬಂದ್ ಮುಷ್ಕರಗಳಿಂದ ರಾಜ್ಯದ ಜನತೆ ಹೈರಾಣಾಗಿದ್ದು ಈ ಹಿನ್ನೆಲೆ ನಾಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Key words: bangalire- Support – Delhi-farmer-protest- Karnataka-decision – Unity Fighting Committee