ʼ ಸ್ಫೋಟ ʼ ಪ್ರಕರಣ : ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್..!

Bangalore ̲ Rameshwaram ̲ hotel  ̲ blast  ̲ cm   ̲ reaction  ̲ mysore

ಮೈಸೂರು, ಮಾ.೦೧, ೨೦೨೪ : (justkannada ̤ in news) ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸದ್ಯ ಸಿಸಿಟಿವಿ ಪರಿಶೀಲನೆ‌ ನಡೆಯುತ್ತಿದೆ. ಯಾರೊ ಒಬ್ಬರು ಬ್ಯಾಗ್ ಇಟ್ಟಿರುವುದು ತಿಳಿದಿದೆ. ಈ ಕುರಿತು ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ. ಇದು ಭಯೋತ್ಪಾಧಕರ ಕೃತ್ಯ ಎಂಬುದರ ಬಗ್ಗೆ ನಮಗೆ ಮಾಹಿತಿ ಲಭಿಸಿಲ್ಲ.

ಈಗಿರುವ ಮಾಹಿತಿ ಪ್ರಕಾರ ಸ್ಥಳಕ್ಕೆ ಪೊಲೀಸರು ಹೋಗಿದ್ದಾರೆ. ಸ್ವಲ್ಪ ಸಮಯದಲ್ಲೇ ಸಂಪೂರ್ಣ ಮಾಹಿತಿ ಗೊತ್ತಾಗುತ್ತದೆ. ಸ್ಫೋಟಕ ಭಾರೀ ಪ್ರಮಾಣದಲ್ಲಿ ನಡೆದಿಲ್ಲ. ಸಣ್ಣ ಪ್ರಮಾಣದದ್ದರೂ ಅದು ಪರಿಣಾಮಕಾರಿಯಾಗಿದೆ.‌

ಎಲ್ಲರ ಕಾಲದಲ್ಲೂ ಕೂಡ ಘಟನೆಗಳು ನಡೆದಿವೆ. ಇಂತಹ ಘಟನೆ ನಡೆಯಬಾರದು ಎಂಬುದು ಉದ್ದೇಶ.

ಇತ್ತೀಚೆಗೆ ಇಂತಹ ಘಟನೆ ನಡೆದಿರಲಿಲ್ಲ. ಮಂಗಳೂರಲ್ಲಿ  ಸಣ್ಣ ಪ್ರಮಾಣದಲ್ಲಿ ಘಟನೆ ನಡೆದಿತ್ತು.

ಹಿಂದಿನ ಸರ್ಕಾರದಲ್ಲಿ ಹಲವು ಸ್ಫೋಟಗಳು ನಡೆದಿತ್ತು. ನಮ್ಮ ಸರ್ಕಾರದಲ್ಲಿ ಈವಾಗ ಈ ಘಟನೆ ನಡೆದಿದೆ. ಆರೋಪಿಗಳನ್ನ ಪತ್ತೆ ಹಚ್ಚಿ ಶಿಕ್ಷಿಸಲಾಗುವುದು.

ಬ್ಲಾಸ್ಟ್ ಆಗಿರುವುದು ಸತ್ಯವಾಗಿದೆ. ಬ್ಲಾಸ್ಟ್ ಮಾಡಿರುವವರ ವಿರುದ್ಧ ಶಿಸ್ತಿನ, ಕಠಿಣ ಕ್ರಮ ಆಗಲಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಬ್ಲಾಸ್ಟ್ ಆಗಿದೆ ಎಂಬ ಮಾಹಿತಿ ಬಂದಿದೆ. ಪೊಲೀಸರು ಸೂಕ್ತ ತನಿಖೆ ನಡೆಸುತ್ತಿದ್ದಾರೆ.‌ ಯಾರೂ, ಏನೂ ಅಂತ ಯಾರಿಗೂ ಗೊತ್ತಿಲ್ಲ.

ಕ್ಯಾಷಿಯರ್ ಬಳಿ ಹೋಗಿ ಟೋಕನ್ ತೆಗೆದುಕೊಂಡಿದ್ದಾನೆ. ಅವರ ಬಳಿ ಬ್ಯಾಗ್ ಇರಿಸಿದ್ದಾನೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಗಾಯಾಳುಗಳಿಗೆ ಪರಿಹಾರ ವಿಚಾರ. ಈ ಕುರಿತು ಗೃಹ ಸಚಿವರು ಮಾಹಿತಿ ನೀಡ್ತಾರೆ. ಸಂಪೂರ್ಣ ಮಾಹಿತಿ ಸಿಕ್ಕಿದ ಮೇಲೆ ನಾನು ಮಾತನಾಡುವೆ.

ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ.

Key words : Bangalore ̲ Rameshwaram ̲ hotel  ̲ blast  ̲ cm   ̲ reaction  ̲ mysore