ಬೆಂಗಳೂರಿನಲ್ಲಿ ಫೆ.7ರಂದು ಎಸ್.ಟಿ.ಮೀಸಲಾತಿ ಹಕ್ಕೊತ್ತಾಯ ಸಮಾವೇಶ

ಮೈಸೂರು,ಫೆಬ್ರವರಿ,03,2021(www.justkannada.in): ಬೆಂಗಳೂರಿನ ನೈಸ್ ರಸ್ತೆ ಜಂಕ್ಷನ್ ಬಳಿಯ ವಸ್ತುಪ್ರದರ್ಶನ ಮೈದಾನದಲ್ಲಿ ಫೆ.7ರಂದು ಎಸ್.ಟಿ.ಮೀಸಲಾತಿ ಹಕ್ಕೊತ್ತಾಯ ಸಮಾವೇಶ ಆಯೋಜಿಸಲಾಗಿದೆ ಎಂದು ಹಾಲುಮತ ಮಹಾಸಭಾ ಖಜಾಂಜಿ ಉಮೇಶ್ ಕೋಟೆ ಹೇಳಿದರು.jk

ಬುಧವಾರ ಪತ್ರಕರ್ತರ ಭವನದಲ್ಲಿ ಕುರುಬರ ಎಸ್.ಟಿ.ಮೀಸಲಾತಿ ಹೋರಾಟ ವಿಚಾರ ಕುರಿತು ಹಾಲುಮತ ಮಹಾಸಭಾದಿಂದ ನಡಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಸಮಾವೇಶವು ಶ್ರೀ ಕಾಗಿನೆಲೆ ಮಹಾಸಂಸ್ಥಾನದ ನಿರಂಜನಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 10ಲಕ್ಷಕ್ಕೂ ಹೆಚ್ಚು ಮಂದಿ ಸೇರಲಿದ್ದಾರೆ ಎಂದರು.

ಮೈಸೂರು ಜಿಲ್ಲೆಯಿಂದ ಒಂದೂವರೆ ಲಕ್ಷ ಮಂದಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ಮೈಸೂರಿನಿಂದ ಬೆಂಗಳೂರಿನವರೆಗೆ ಬೈಕ್ ರ್ಯಾಲಿ ನಡೆಸಲು ನಿರ್ಧಾರಿಸಲಾಗಿದೆ. ಸಮಾವೇಶದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.Bangalore-7th of February-ST Reservation-demanding rights-Convention

ಕೃಪೆ : internet

ಇದು ನಮ್ಮ ಹೋರಾಟ ಅಲ್ಲ ಕೇವಲ ಹಕ್ಕೊತ್ತಾಯ. ಕೇಂದ್ರ ರಾಜ್ಯ ಸರ್ಕಾರಗಳು ನಮ್ಮ ಬೇಡಿಕೆಯನ್ನು ಪುರಸ್ಕರಿಸದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

key words : Bangalore-7th of February-ST Reservation-demanding rights-Convention