ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ…

ಬೆಂಗಳೂರು,ಜು,10,2020(www.justkannada.in): ಗೌರವ ಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಆಶಾಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.jk-logo-justkannada-logo

ಆರೋಗ್ಯ ಇಲಾಖೆಯ ಕೇಂದ್ರ ಕಚೇರಿ ಬಳಿ ಸಾಮಾಜಿಕ ಅಂತರ ಕಾಯ್ದುಕೊಂಡು ಆಶಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 12 ಸಾವಿರಕ್ಕೆ ಗೌರವಧನ ಹೆಚ್ಚಳ ಮಾಡಬೇಕು. ಕೊರೋನಾ ವಿರುದ್ದ ಹೋರಾಡಲು ಅಗತ್ಯ ಪ್ರಮಾಣದ ಸುರಕ್ಷತಾ ಕಿಟ್ ಗಳನ್ನ ಒದಗಿಸಬೇಕು ಎಂದು ಒತ್ತಾಯಿಸಿ ಇಂದು ತಮ್ಮ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.bangalore-asha-worker-protest-rise-wages

ಆಶಾ ಕಾರ್ಯಕರ್ತೆಯರು ಹಳ್ಳಿಹಳ್ಳಿಗೆ ತೆರಳಿ ತನ್ನ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ದದ ಹೋರಾಟದಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಗೌರವಧನ ಹೆಚ್ಚಳ ಮತ್ತು ಅಗತ್ಯ ಸುರಕ್ಷತಾ ಕಿಟ್ ಗಳನ್ನ ನೀಡುವಂತೆ ಒತ್ತಾಯಿಸಿ ಆಶಾಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

 

Key words: Bangalore- asha worker-protest- rise- Wages