ಬೈಕ್ ಅಡ್ಡಗಟ್ಟಿ ಗ್ರಾ.ಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ…

ಬೆಂಗಳೂರು,ಜ,30,2020(www.justkannada.in):   ಬೈಕ್ ಅಡ್ಡಗಟ್ಟಿ ಗ್ರಾಮಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ  ತರಬಹಳ್ಳಿ ಗ್ರಾಮಪಂಚಾಯತ್ ಸದಸ್ಯ ತ್ಯಾಗರಾಜ್ ಮೇಲೆಯೇ ಈ ಹಲ್ಲೆ ನಡೆದಿರುವುದು. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಹೆಚ್.ಕ್ರಾಸ್ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ತ್ಯಾಗರಾಜ್ ಅಡ್ಡಗಟ್ಟಿ ತ್ಯಾಗರಾಜ್  ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಇಂದು ಬೆಳಿಗ್ಗೆ 8 ಘಂಟೆ ವೇಳೆಗೆ ಈ ಘಟನೆ ನಡೆದಿದೆ.

ಹಳೆ ವೈಷಮ್ಯ ಹಿನ್ನೆಲೆ ಹಲ್ಲೆ ನಡೆದಿದೆ ಎಂದು ಶಂಕಿಸಲಾಗಿದೆ. ತ್ಯಾಗರಾಜ್ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಶಿಡ್ಲಘಟ್ಟ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Key words:Bangalore- assault –gram pamchayath- member