ಭರಚುಕ್ಕಿ ಬಳಿ ಬೆಂಗಳೂರಿನ ವೈದ್ಯೆ ಆತ್ಮಹತ್ಯೆಗೆ ಯತ್ನ: ಅರಣ್ಯ ಇಲಾಖೆ ಸಿಬ್ಬಂದಿ ಸಮಯಪ್ರಜ್ಞೆಯಿಂದ ರಕ್ಷಣೆ

ಚಾಮರಾಜನಗರ, ಜುಲೈ 13, 2019, (www.justkannada.in): ಬೆಂಗಳೂರಿನ ವೈದ್ಯೆ ಭರಚುಕ್ಕಿ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಅವರನ್ನು ರಕ್ಷಿಸಲಾಗಿದೆ. ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚರ್ಮರೋಗ ತಜ್ಞೆಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಸದ್ಯ ಅವರಿಗೆ ಸಮೀಪದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಲಾಗಿದೆ.