ಶಿಕ್ಷಣ ಸಚಿವರ ಮನವಿಗೆ ಸ್ಪಂದಿಸಿ ಪ್ರತಿಭಟನೆ ಕೈ ಬಿಟ್ಟ ಬಿಸಿಯೂಟ ಕಾರ್ಯಕರ್ತೆಯರು…

ಬೆಂಗಳೂರು,ಫೆ,3,2020(www.justkannada.in):  ಕನಿಷ್ಟ ವೇತನ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಸಿಯೂಟ ಕಾರ್ಯಕರ್ತೆಯರು ಇದೀಗ ಪ್ರತಿಭಟನೆಯನ್ನ ವಾಪಸ್ ಪಡೆದಿದ್ದಾರೆ.

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿ, ಈ ನೌಕರರನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಿಸಿಯೂಟ ಕಾರ್ಯಕರ್ತೆಯರು ಧರಣಿ ನಡೆಸುತ್ತಿದ್ದರು. ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಮಧ್ಯೆ ಬೇಡಿಕೆ ಈಡೇರಿಕೆ ಸಂಬಂಧ ಬಿಸಿಯೂಟ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳ ಜತೆ ಫೆಬ್ರವರಿ 13 ರಂದು ಪ್ರತಿಭಟನೆ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದು ಈ ಹಿನ್ನೆಲೆ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆಯನ್ನ ವಾಪಸ್ ಪಡೆದಿದ್ದಾರೆ.

Key words:Bangalore- bisiyuta -activists –protest-withdraw