ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಪ್ರಕರಣ: ಮೃತರ ಸಂಖ್ಯೆ 15ಕ್ಕೆ ಏರಿಕೆ.

ಬೆಂಗಳೂರು,ಅಕ್ಟೋಬರ್,11,2023(www.justkannada.in): ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ ಇದೀಗ 15ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಎಂಬುವವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಅವಘಡ ಸಂಭವಿಸಿದ ವೇಳೆ ಗಾಯಗೊಂಡಿದ್ದ ದಿನೇಶ್ ರನ್ನ ವಿಕ್ಟೋರಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ದಿನೇಶ್ ಸಾವನ್ನಪ್ಪಿದ್ದಾರೆ.

Key words: Bangalore -Fireworks – incident: death -rises 15