Monday, September 21, 2026

BDA Apartments

ರಾಜ್ಯಪಾಲ ವಜುಭಾಯಿ ವಾಲಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್… BDA JK_Adv BDA Adv
Home Front Page ರಾಜ್ಯಪಾಲ ವಜುಭಾಯಿ ವಾಲಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್….

ರಾಜ್ಯಪಾಲ ವಜುಭಾಯಿ ವಾಲಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್….

ಬೆಂಗಳೂರು,ನ,30,2019(www.justkannada.in):  ಆನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯಪಾಲರಾದ ವಜುಬಾಯಿ ವಾಲಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಅನಾರೋಗ್ಯ ಹಿನ್ನೆಲೆ ನವೆಂಬರ್ 24 ರಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ  ಪೊರ್ಟೀಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಡಿಸ್ಚಾರ್ಜ್ ಆದ ಬಳಿಕ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು, ವೈದ್ಯರ ಚಿಕಿತ್ಸೆಯಿಂದಾಗಿ ನಾನು ಆರೋಗ್ಯವಾಗಿದ್ದೇನೆ.  ನವೆಂಬರ್ 24 ರಂದು ನಾನು ಆಸ್ಪತ್ರೆಗೆ ದಾಖಲಾಗಿದೆ.  ನವೆಂಬರ್ 25 ರಂದು ಬೈಪಾಸ್ ಸರ್ಜರಿಯಾಗಿದೆ . ಈಗ ಆರೋಗ್ಯವಾಗಿದ್ದೇನೆ ಎಂದರು. ಇನ್ನು ನವೆಂಬರ್ 27 ರಂದು ಸಿಎಂ ಬಿಎಸ್ ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯಪಾಲ ವಜುಭಾಯಿವಾಲಾ ಅವರ ಆರೋಗ್ಯವನ್ನ ವಿಚಾರಿಸಿದ್ದರು.

Key words: Bangalore- Governor- Vajubhai Wala- discharged -hospital