ಫೆ.26ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ

ಬೆಂಗಳೂರು, ಜನವರಿ 30, 2019 (www.justkannada.in): 12ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಅದ್ಧೂರಿಯಾಗಿ ನಡೆಸಲು ರಾಜ್ಯ ಚಲನಚಿತ್ರ ಅಕಾಡೆಮಿ ತೀರ್ಮಾನಿಸಿದೆ. ಫೆಬ್ರುವರಿ 26ರಿಂದ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಲಿದೆ.

ಅಕಾಡೆಮಿ ನೂತನ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು, ಸಿನಿಮೋತ್ಸವ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ನಿರ್ಮಾಪಕರ ಸಂಘದ ಪದಾಧಿಕಾರಿಗಳ ಜತೆ ಮಂಗಳವಾರ ಪ್ರತ್ಯೇಕ ಸಭೆ ನಡೆಸಿದರು.

ಚಿತ್ರೋತ್ಸವದ ಉದ್ಘಾಟನೆ ಮತ್ತು ಸಮಾರೋಪದಲ್ಲಿ ಚಿತ್ರರಂಗಕ್ಕೆ ಸಂಬಂಧಿಸಿದ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು. ಪದಾಧಿಕಾರಿಗಳು, ನಿರ್ದೇಶಕರು ಮತ್ತು ನಿರ್ಮಾಪಕರು ಚಿತ್ರೋತ್ಸವದಲ್ಲಿ ಯಾವುದೇ ಅವ್ಯವಸ್ಥೆ, ಆಭಾಸಗಳು ಆಗದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಬಗ್ಗೆ ಸಲಹೆಗಳನ್ನು ನೀಡಿದರು.