Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ದೇವರಾಣೆ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ- ಸಚಿವ ವಿ.ಸೋಮಣ್ಣ ಹೇಳಿಕೆ

ದೇವರಾಣೆ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ- ಸಚಿವ ವಿ.ಸೋಮಣ್ಣ ಹೇಳಿಕೆ

ಬೆಂಗಳೂರು, ಜ,14,2020(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತೋ ಏನೋ ಆ ದೇವರೇ ಬಲ್ಲ. ದೇವರಾಣೆ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ  ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವ ವಿ.ಸೋಮಣ್ಣ,  ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ. ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಕೇಳಬೇಕು. ಯಾರಿಗೆ ಯಾವ ಖಾತೆ, ಸಂಪುಟ ವಿಸ್ತರಣೆ ಯಾವಾಗ ಎಂಬುದರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನೇ ಕೇಳಬೇಕು ಎಂದರು.

ರಾಜ್ಯದಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆ ಬಳಿಕ ಗೆದ್ದ ಶಾಸಕರಿಗೆಲ್ಲ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಭರವಸೆ ನೀಡಿದ್ದಾರೆ. ಇನ್ನು ಜನವರಿ 17 ರಂದು ಅಮಿತ್ ಶಾ ರಾಜ್ಯಕ್ಕೆ ಬರಲಿದ್ದು ಅಂದು ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.

 

Key words: Bangalore-minister v.somanna- Cabinet expansion-no