ನೂರಕ್ಕೆ ನೂರು ನಮ್ಮ ಸರ್ಕಾರ ಮುಂದುವರೆಯುತ್ತೆ:  ಸೋತವರಿಗೂ ಮಂತ್ರಿಸ್ಥಾನ ವಿಚಾರ- ಸಚಿವ ಸೋಮಣ್ಣ ಪ್ರತಿಕ್ರಿಯಿಸಿದ್ದು ಹೀಗೆ…

ಬೆಂಗಳೂರು,ಡಿ,7,2019(www.justkannada.in):  ಬಿಜೆಪಿ ಸರ್ಕಾರವನ್ನ ಮುಂದುವರೆಸುವುದು ಜನರ ಉದ್ದೇಶವಾಗಿದೆ. ಹೀಗಾಗಿ ನೂರಕ್ಕೆ ನೂರು ನಮ್ಮ ಸರ್ಕಾರ ಮುಂದುವರೆಯುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಸೋಮಣ್ಣ,  ನಾನು ಉಪಚುನಾವಣೆಯ ಮಾಸ್ಟರ್. ರಾಜ್ಯದಲ್ಲಿ ಜನರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಕೈ ಬಿಡುವುದಿಲ್ಲ ನಾವು ಉಪಷುನಾವಣೆಯಲ್ಲಿ 12 ರಿಂದ 13 ಸ್ಥಾನ ಗೆಲ್ಲುತ್ತೇವೆ. ಹೀಗಾಗಿ ನಮ್ಮ ಸರ್ಕಾರ ಸೇಫ್. ಬಿಜೆಪಿ ಸರ್ಕಾರ ನೂರಕ್ಕೆ ನೂರರಷ್ಟು ಮುಂದುವರೆಯುತ್ತದೆ ಎಂದು ತಿಳಿಸಿದರು.

ಉಪಚುನಾವಣೆಯಲ್ಲಿ ಸೋತವರಿಗೂ ಮಂತ್ರಿ ಸ್ಥಾನ ನೀಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸೋಮಣ್ಣ,  ಈ ಬಗ್ಗೆ ಸಿಎಂ ಮತ್ತು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಿಎಂ ಬಿಎಸ್ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎಂದರು.

ಹಾಗೆಯೇ ಡಿಸಿಎಂ ಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರಿಗೂ ಐಶ್ವರ್ಯ ರೈ ಬೇಕು. ಅದ್ರೆ ಇರೋದು ಒಬ್ಬರೇ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ವಿ.ಸೋಮಣ್ಣ,  ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಈ ರೀತಿ ಹೇಳಿಕೆ ಅವರ ವೈಯಕ್ತಿಕವಾದದ್ದು. ಅವರಿಗೂ ವಯಸ್ಸಾಗಿದೆ. ಹೀಗಾಗಿ ಈ ರೀತಿ ಹೇಳಿದ್ದಾರೆ. ಈ ಬಗ್ಗೆ ನಾನು ಮಾತನಾಡಲ್ಲ ಎಂದರು.

Key words: Bangalore-minister-V.Somanna- our government- will -continue.