ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅಪಘಾತ:  ಮೂವರು ಸ್ಥಳದಲ್ಲೇ ಸಾವು..

ರಾಮನಗರ,ಮೇ,1,2023(www.justkannada.in):  ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ  ಮತ್ತೊಂದು ಅಪಘಾತದಲ್ಲಿ  ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಈ ಅಪಘಾತ ನಡೆದಿದೆ.  ಬೆಂಗಳೂರಿನಿಂದ ಮೈಸೂರಿಗೆ ಮೂವರು ಒಂದು ದ್ವಿಚಕ್ರ ವಾಹನದಲ್ಲಿ  ತೆರಳುತ್ತಿದ್ದರು. ಈ ನಡುವೆ ಕೆಟ್ಟು ನಿಂತಿದ್ದ ಕಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ  ಹೊಡೆದು ಮೂವರು ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ ಹಿಂದೆಯಿಂದ ಬಂದ ಮತ್ತೊಂದು ಕಾರು ಮೂವರ ಮೇಲೆ ಹರಿದಿದ್ದು  ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು  ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Bangalore-Mysore -Express Highway-Three died – accident.