ನನ್ನ ಕ್ಷೇತ್ರದಲ್ಲಿ ನನ್ನನ್ನ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ- ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಅನರ್ಹ ಶಾಸಕ ಎಂಟಿಬಿ ನಾಗರಾಜ್…

ಬೆಂಗಳೂರು,ಅ,14,2019(www.justkannada.in):  ಉಪಚುನಾವಣೆಯಲ್ಲಿ ನನ್ನ ಕ್ಷೇತ್ರದಲ್ಲಿ ನನ್ನನ್ನ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯಗೆ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಟಾಂಗ್ ಕೊಟ್ಟರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್,  ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತದೆ ಎಂದು ಸಿದ್ಧರಾಮಯ್ಯ ಅನಗತ್ಯವಾಗಿ ಹಗಲುಗನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಮಧ್ಯಾಂತರ ಚುನಾವಣೆ ಬರವುದಿಲ್ಲ. ನನ್ನ ಕ್ಷೇತ್ರದಲ್ಲಿ ನನ್ನನ್ನ ಸೋಲುಸಲು ಸಾಧ್ಯವಿಲ್ಲ.  ನಮಗೆ ಕೋರ್ಟ್ ನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಎಂಟಿಬಿ ನಾಗರಾಜ್ ಪ್ರತಿ ವೋಟಿಗೆ 7 ಸಾವಿರ ರೂ. ನೀಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಸಚಿವ ಕೃಷ್ಣೇಭೈರೇಗೌಡರಿಗೆ ತಿರುಗೇಟು ನೀಡಿದ ಎಂಟಿಬಿ ನಾಗರಾಜ್,  ಕೃಷ್ಣೇಭೈರೇಗೌಡರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಕಿಡಿಕಾರಿದರು.

Key words:Bangalore –not lose -MTB Nagaraj –tong- former cm- Siddaramaiah