ಪ್ರತಿಭಟನೆ ವೇಳೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಶಕ್ಕೆ ಪಡೆದ ಪೊಲೀಸರು.

ಬೆಂಗಳೂರು,ಮಾರ್ಚ್,19,2024(www.justkannada.in):  ಬೆಂಗಳೂರಿನ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಇಂದು ನಡೆದ ಹನುಮಾನ್ ಚಾಲೀಸಾ ಮೆರವಣಿಗೆ, ಹಿಂದೂ ಕಾರ್ಯಕರ್ತರ ಪ್ರತಿಭಟನೆ  ವೇಳೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು.

ಹನುಮಾನ್ ಚಾಲೀಸಾ ಮೆರವಣಿಗೆ ಮಾಡುತ್ತಿರುವುದಕ್ಕೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆಯೇ ಕಾರಣ. ಧಾರ್ಮಿಕ ಭಾವನೆ ಕೆರಳಿಸಿ, ಸ್ಥಳೀಯರ ಪ್ರತಿಭಟನೆಗೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾನೂನು ಘಟಕ ಚುನಾವಣಾ ಆಯುಕ್ತರಿಗೆ ದೂರು ನೀಡಿತ್ತು.

ಈ ನಡುವೆ  ದೂರು ದಾಖಲಾಗುತ್ತಿದ್ದಂತೆ ನಗರ್ತಪೇಟೆಯಲ್ಲಿ ಸ್ಥಳೀಯ ವ್ಯಾಪಾರಿಗಳು ನಡೆಸುತ್ತಿದ್ದ ಹನುಮಾನ್ ಚಾಲೀಸಾ ರ್ಯಾಲಿ ಕೈಬಿಡುವಂತೆ ಮನವೊಲಿಕೆಗೆ ಬಂದಿದ್ದ . ಸಂಸದ ತೇಜಸ್ವಿ ಸೂರ್ಯ ಅವರನ್ನ ಪೊಲೀಸರು ವಶಕ್ಕೆ ಪಡೆದರು.

ಇನ್ನು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ  ಪಿ.ಸಿ. ಮೋಹನ್, ಶಾಸಕ ಸಿ.ಕೆ. ರಾಮಮೂರ್ತಿ ಸೇರಿ ಹಿಂದೂ ಕಾರ್ಯಕರ್ತರನ್ನು ಬೆಂಗಳೂರು ಸಿಎಎಆರ್‌ ಗ್ರೌಂಡ್‌ ಠಾಣೆ ಪೊಲೀಸರು ವಶಕ್ಕೆ ಪಡೆದರು.  ಪ್ರತಿಭಟನೆ ಹಿನ್ನೆಲೆ ನಗರ್ತಪೇಟೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ನಂತರ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದರು.

Key words: bangalore Police –arrested- BJP MP- Tejaswi Surya – protest.