Thursday, October 15, 2026

Dasara Wishes

Strengthening DasraWishes_JK DasraWishes JK
Happy Dasara
Home Front Page ಡಿಜಿಟಲ್ ಮಾಧ್ಯಮಕ್ಕೂ ಮಾನ್ಯತೆ ನೀಡಿ : ರಾಜ್ಯ ಸರಕಾರಕ್ಕೆ ನೂತನ ಅಧ್ಯಕ್ಷ ಸಮೀವುಲ್ಲಾ ಮನವಿ.

ಡಿಜಿಟಲ್ ಮಾಧ್ಯಮಕ್ಕೂ ಮಾನ್ಯತೆ ನೀಡಿ : ರಾಜ್ಯ ಸರಕಾರಕ್ಕೆ ನೂತನ ಅಧ್ಯಕ್ಷ ಸಮೀವುಲ್ಲಾ ಮನವಿ.

Bangalore-press.club-Karnataka-state-digital-media-forum-journalist

 

ಬೆಂಗಳೂರು, ಡಿ.13, 2021 : (www.justkannada.in news ) : ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನೀಡಿರುವಂತೆಯೇ ಡಿಜಿಟಲ್ ಮಾಧ್ಯಮಕ್ಕೂ ಮಾನ್ಯತೆ ನೀಡಬೇಕು ಎಂದು ‘ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ’ ನ ನೂತನ ಅಧ್ಯಕ್ಷ ಸಮೀವುಲ್ಲಾ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.

ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮದ ಸಭೆಯಲ್ಲಿ ಮಾತನಾಡಿದ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂನ ನೂತನ ಅಧ್ಯಕ್ಷ ಸಮೀವುಲ್ಲಾ ಅವರು ಹೇಳಿದಿಷ್ಟು….

ಡಿಜಿಟಲ್ ಮೀಡಿಯಾ ಎಂಬುದು ಪ್ರತಿಯೊಬ್ಬರಿಗೂ ನವಯುಗಕ್ಕೆ ಅವಶ್ಯಕವಾಗಿದ್ದು, ಪ್ರಿಂಟ್ ಹಾಗೂ ಟಿವಿ ಮಾಧ್ಯಮಗಳಿಗಿಂತಲೂ ಪರಿಣಾಮಕಾರಿಯಾಗಿದೆ. ವೀಕ್ಷಕರು ಮತ್ತು ಓದುಗರನ್ನು ಹೆಚ್ಚು ತಲುಪಲು ತನ್ನದೇ ಆದ ಸಾಮರ್ಥ್ಯ ಹೊಂದಿದೆ. ಹೀಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಡಿಜಿಟಲ್ ಮಾಧ್ಯಮಗಳಿಗೆ ಒತ್ತು ನೀಡಿವೆ. ಪಕ್ಕದ ರಾಜ್ಯಗಳಾದ ಆಂದ್ರಪ್ರದೇಶ ಮತ್ತು ತಮಿಳು ನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಡಿಜಿಟಲ್ ಮಾಧ್ಯಮ ಒಕ್ಕೂಟ ಅಸ್ಥಿತ್ವದಲ್ಲಿವೆ.

ಕರ್ನಾಟಕದಲ್ಲಿ ಡಿಜಿಟಲ್ ಮಾಧ್ಯಮ ಹೆಚ್ಚು ಪರಿಣಾಮಕಾರಿಯಾಗಿರುವುದರಿಂದ ನಮ್ಮ ಸಂಘಟನೆ ಮಾಧ್ಯಮ ಲೋಕದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವವರ ಹಿತಾಸಕ್ತಿ ಕಾಪಾಡಲು ಬದ್ದವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿರುವುದರಿಂದ ಇದರ ಅಗತ್ಯತೆ ಎಂದಿಗಿಂತ ಈಗ ಹೆಚ್ಚಿದೆ.

ಹೀಗಾಗಿ ಡಿಜಿಟಲ್ ಮಿಡಿಯಾ ಪೋರಮ್ ನೂತನವಾಗಿ ಅಸ್ಥಿತ್ವಕ್ಕೆ ಬಂದಿದ್ದು, ಪತ್ರಿಕೆ ಮತ್ತು ಮಾಧ್ಯಮಗಳಿಗೆ ನೀಡಿರುವಂತೆಯೇ ನಮಗೂ ಮಾನ್ಯತೆ ನೀಡಬೇಕೆಂದು ಮನವಿ ಮಾಡಿದರು.

ಫೋರಂ ಅಸ್ಥಿತ್ವಕ್ಕೆ :

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂನ ರಚನೆ ಕುರಿತು ಚರ್ಚೆ ನಡೆಸಲಾಯಿತು. ಬಳಿಕ ಹಿರಿಯ ಪತ್ರಕರ್ತ ಸಮೀವುಲ್ಲಾ ಅವರನ್ನು ಫೋರಂನ ನೂತನ ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಸುನೀಲ್ ಸಿರ್ಸಂಗಿ ಮತ್ತು ವಸಂತ ಬಿ ಈಶ್ವರಗೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ, ಜಂಟಿ ಕಾರ್ಯದರ್ಶಿಯಾಗಿ ರಜನಿ ಹಾಗೂ ಮಾಲತೇಶ್ ಅರಸ್ ಹರ್ತಿಕೋಟೆ, ಖಜಾಂಚಿಯಾಗಿ ಸನತ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಎಸ್ ರಾಘವೇಂದ್ರ, ಗೌರೀಶ್ ಅಕ್ಕಿ, ವಿಜಯ್ ಭರಮಸಾಗರ, ದರ್ಶನ್ ಆರಾಧ್ಯ, ಪ್ರವೀಣ್ ಏಕಾಂತ, ಅಮರ್ ಪ್ರಸಾದ್, ಅಂಕಿತಾ, ಹರೀಶ್ ಅರಸು ಆಯ್ಕೆಗೊಂಡಿದ್ದಾರೆ ಎಂದು ಫೋರಂನ ಪ್ರಕಟಣೆ ತಿಳಿಸಿದೆ.

 

key words : Bangalore-press.club-Karnataka-state-digital-media-forum-journalist