Monday, October 5, 2026

BDA Apartments

ಪ್ರಧಾನಿ ಮೋದಿ ಭೇಟಿಯಾಗಿ BDA JK_Adv BDA Adv
Home Election News and Analysis ಬೆಂಗಳೂರು ಸೆಂಟ್ರಲ್ ಕ್ಷೇತ್ರ: ಠೇವಣಿ ಕಳೆದುಕೊಳ್ಳುವ ಆತಂಕದಲ್ಲಿ ಪ್ರಕಾಶ್ ರೈ, ಕೈ ಅಭ್ಯರ್ಥಿ ರಿಜ್ವಾನ್ ಗೆ...

ಬೆಂಗಳೂರು ಸೆಂಟ್ರಲ್ ಕ್ಷೇತ್ರ: ಠೇವಣಿ ಕಳೆದುಕೊಳ್ಳುವ ಆತಂಕದಲ್ಲಿ ಪ್ರಕಾಶ್ ರೈ, ಕೈ ಅಭ್ಯರ್ಥಿ ರಿಜ್ವಾನ್ ಗೆ ಮುನ್ನಡೆ

ಬೆಂಗಳೂರು, ಮೇ 23, 2019 (www.justkannada.in): ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮತ ಎಣಿಕೆ ಭರದಿಂದ ಸಾಗಿದ್ದು, ಭಾರಿ ಕುತೂಹಕ ಮೂಡಿಸಿದ್ದ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಟ ಪ್ರಕಾಶ್ ರೈ ಠೇವಣಿ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷಾದ್ ಅವರು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷಾದ್ ಅವರು 227018 ಮತ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ 201959 ಮತಗಳನ್ನು ಪಡೆದಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿರುವ ನಟ ಪ್ರಕಾಶ್ ರೈ ಅವರು 10,168 ಮತ ಪಡೆದಿದ್ದು, ಠೇವಣಿ ಕಳೆದುಕೊಳ್ಳುವ ಮುನ್ಸೂಚನೆ ನೀಡಿದ್ದಾರೆ.