JUST 5 ನಿಮಿಷದಲ್ಲೇ ಕೊವಿಡ್ ಪರೀಕ್ಷೆ, ಒಂದೇ ಬಾರಿಗೆ 8 ಮಾದರಿ ಪರೀಕ್ಷೆ. ತಗಲುವ ವೆಚ್ಚ ರೂ. 150 ಮಾತ್ರ..!

ಬೆಂಗಳೂರು, ಮೇ 14, 2020 : (www.justkannada.in news) : ರಾಜ್ಯ ಜೈವಿಕ ತಂತ್ರಜ್ಞಾನ ಇಲಾಖೆಯ ‘ಬೆಂಗಳೂರು ಬಯೋ ಇನೋವೇಷನ್‌ ಸೆಂಟರ್‌’ ನಲ್ಲಿ ಇರುವ 45 ಸ್ಟಾರ್ಟ್ಅಪ್ ಗಳು ಕೊವಿಡ್ ಸೋಂಕಿಗೆ ಔಷಧ ಕಂಡುಹಿಡಿಯುವ‌‌‌ ಮತ್ತು ತ್ವರಿತವಾಗಿ ಸೋಂಕು ಪತ್ತೆ ಪರೀಕ್ಷೆ ಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಅವಿರತ ಶ್ರಮ ಹಾಕುತ್ತಿದ್ದು ಅಂತಹ ಕೆಲವು ಸಂಸ್ಥೆಗಳ ಪ್ರತಿನಿಧಿಗಳ ಜತೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಸಂವಾದ‌ ನಡೆಸಿ, ಅವರಿಗೆ ಬೆಂಬಲ ಸೂಚಿಸಿದರು.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇರುವ ‘ಬೆಂಗಳೂರು ಬಯೋ ಇನೋವೇಷನ್‌ ಸೆಂಟರ್‌’ಗೆ ಗುರುವಾರ ಭೇಟಿ ನೀಡಿದ ಅವರು ಕೊವಿಡ್ ಟೆಸ್ಟ್‌ ಹಾಗೂ ಕೊವಿಡ್ ಔಷಧ ಅನ್ವೇಷಣೆ ಕಾರ್ಯದಲ್ಲಿ ತೊಡಗಿರುವ ಸಂಶೋಧಕರ ಜತೆ ಸಂವಾದ ನಡೆಸಿದರಲ್ಲದೆ, ಎಸ್‌ಎನ್‌ ಲೈಫ್‌ಸೈನ್ಸಸ್‌, ಕಫ/ಸ್ವ್ಯಾಬ್‌ ಮಾದರಿಯಿಂದ ಆರ್‌ಎನ್‌ಎ ಬೇರ್ಪಡಿಸುವ ಪ್ರೋಗ್ರಾಂಬಲ್‌ ರೊಬೊಟಿಕ್‌ ಯಂತ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಕೊವಿಡ್ ಸೋಂಕಿಗೆ ಔಷಧ ಕಂಡುಹಿಡಿಯುವುದರ ಜತೆಗೆ ಕಡಿಮೆ ವೆಚ್ಚದಲ್ಲಿ ಮತ್ತು ತ್ವರಿತವಾಗಿ ಸೋಂಕು ಪತ್ತೆ ಮಾಡುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಕೆಲವು ಸ್ಟಾರ್ಟ್ ಅಪ್ ಗಳು ಕ್ಲಿನಿಕಲ್ ಟೆಸ್ಟ್ ಹಂತದಲ್ಲಿದ್ದರೆ, ಇನ್ನು ಕೆಲವು ಸಂಶೋಧನೆ ಮುಗಿಸಿ ನಿಯಂತ್ರಣ ಪ್ರಾಧಿಕಾರಗಳ ಒಪ್ಪಿಗೆಗಾಗಿ ಕಾಯುತ್ತಿವೆ. ಒಟ್ಟಿನಲ್ಲಿ ಕರ್ನಾಟಕದ ಸಂಸ್ಥೆಗಳು ಈ ಸೋಂಕಿನ ವಿರುದ್ಧ ಹೋರಾಡಲು ಜಗತ್ತಿಗೆ ಪರಿಹಾರ ಸೂಚಿಸುತ್ತಿರುವುದು‌ ನಿಜಕ್ಕೂ ಖುಷಿಯ ವಿಚಾರ,” ಎಂದು ಉಪ ಮುಖ್ಯ ಮಂತ್ರಿ ಹೇಳಿದರು.

bangalore-start.up-company-covid-tests-five.minits-charge-Rs.150

5 ನಿಮಿಷದ ಪರೀಕ್ಷೆ

“ಜೈವಿಕ ತಂತ್ರಜ್ಞಾನ ಕ್ಷೇತ್ರದ ಕಂಪನಿಯೊಂದು ಕೇವಲ 5 ನಿಮಿಷದಲ್ಲಿ ಕೊವಿಡ್ ಸೋಂಕು ಪರೀಕ್ಷೆ ಮಾಡುವ ಯಂತ್ರ ಸಿದ್ಧಪಡಿಸಿದ್ದರೆ, ಮತ್ತೊಂದು ಕಂಪನಿ ಸೋಂಕು ಪತ್ತೆ ಜತೆಗೆ ಸ್ಯಾಂಪಲ್ ಅನ್ನು ತಕ್ಷಣವೇ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಯಂತ್ರ ಸಂಶೋಧಿಸಿದೆ. ಅದೇ ರೀತಿ ಹಲವು ಕಂಪನಿಗಳು ನಾನಾ ರೀತಿಯ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿವೆ. ‘ಬೆಂಗಳೂರು ಬಯೋ ಇನೋವೇಷನ್‌ ಸೆಂಟರ್‌’ ವ್ಯಾಪ್ತಿಯಲ್ಲಿ ಸ್ಟಾರ್ಟ್ಅಪ್ ಗಳು ಇಂತಹ ಯಶಸ್ಸು ಸಾಧಿಸುತ್ತಿರುವುದು ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಅತ್ಯಂತ ಉತ್ತಮ ಬೆಳವಣಿಗೆ. ಆರೋಗ್ಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಆರ್ಥಿಕ ವಹಿವಾಟು ಮುಂದುವರಿಸಲು 5 ನಿಮಿಷದ ಪರೀಕ್ಷೆಯಿಂದ ಸಾಧ್ಯವಾಗಲಿದೆ,” ಎಂದರು.

“ಈಗಾಗಲೇ ಸೋಂಕು ಪತ್ತೆ ತಂತ್ರಜ್ಞಾನ ಅಭಿವೃದ್ಧಿಪಡಿಸಿರುವ ಕಂಪನಿಗಳು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿ ಯಶಸ್ಸು ಸಾಧಿಸಿದ್ದು,ಇದೀಗ ಕೊವಿಡ್ ಸೋಂಕು ಪರೀಕ್ಷೆಗೆ ಸೋಂಕಿತರ ಗಂಟಲು ದ್ರವ ನೀಡುವಂತೆ ಕೇಳಿಕೊಂಡಿವೆ. ಈ ಪ್ರಯೋಗ ಯಶಸ್ವಿಯಾದರೆ ಸ್ಥಳೀಯವಾಗಿ ಸಿದ್ಧಪಡಿಸಿದ ತಂತ್ರಜ್ಞಾನದಿಂದಲೇ ಸೋಂಕು ಪತ್ತೆ ಮಾಡಬಹುದು ಎಂದು ಹೇಳಿವೆ. ಆದರೆ, ಪಾಸಿಟಿವ್ ಬಂದಿರುವ ರೋಗಿಯ ಗಂಟಲು ದ್ರವವನ್ನು ಸಂಗ್ರಹಿಸುವುದು ಮತ್ತು ಪ್ರಯೋಗದ ಬಳಿಕ ವಿಲೇವಾರಿ ಮಾಡುವುದು ಅತ್ಯಂತ ಸವಾಲಿನ ಕೆಲಸ. ಇದಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕಂಪನಿಗೆ ಅಗತ್ಯವಿರುವ ಗಂಟಲು ದ್ರವ ಮಾದರಿಯನ್ನು ಒದಗಿಸುವ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಸಮಿತಿ ರಚನೆ

ಈ ಸ್ಟಾರ್ಟ್ಅಪ್ ಕಂಪನಿಗಳು ಇನ್ನಷ್ಟು ಪರಿಣಾಕಾರಿಯಾಗಿ ತಮ್ಮ ಸಂಶೋಧನಾ ಕಾರ್ಯ ಮುಂದುವರಿಸಲು ಸರ್ಕಾರದಿಂದಲೂ ಸಾಕಷ್ಟು ಸಹಕಾರ ಬೇಕು. ಈ ಹಿನ್ನೆಲೆಯಲ್ಲಿ ಕಂಪನಿಗಳು ಮತ್ತು ಸರ್ಕಾರದ ಮಧ್ಯೆ ಸಮನ್ವಯ ಸಾಧಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸ್ಥಳದಲ್ಲೇ ಇದ್ದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಅವರಿಗೆ ಸೂಚಿಸಿದರು.

bangalore-start.up-company-covid-tests-five.minits-charge-Rs.150

ಒಂದೇ ಬಾರಿಗೆ 8 ಮಾದರಿ ಪರೀಕ್ಷೆ

“ಎಸ್‌ಎನ್‌ ಲೈಫ್‌ಸೈನ್ಸ್‌ ಪ್ರೋಗ್ರಾಂಬಲ್‌ ರೊಬೊಟಿಕ್‌ ಯಂತ್ರವು ಕಫ/ಸ್ವ್ಯಾಬ್‌ಗಳ ಕ್ಲಿನಿಕಲ್‌ ಮಾದರಿಯ ಆರ್‌ಎನ್‌ಎ ಪ್ರತ್ಯೇಕಿಸುವ ಕೆಲಸ ಮಾಡುತ್ತದೆ, ಏಕಕಾಲದಲ್ಲಿ ಎಂಟು ಮಾದರಿಗಳ ಟೆಸ್ಟ್‌ ಮಾಡುವುದು ಈ ಯಂತ್ರದ ವಿಶೇಷತೆ. ಜತೆಗೆ ಪ್ರತಿ ಮಾದರಿಯ ಆರ್‌ಎನ್‌ಎ ಪ್ರತ್ಯೇಕಿಸುವ ವೆಚ್ಚವು 500ರೂ. ನಿಂದ 150ಕ್ಕೆ ಇಳಿಕೆಯಾಗಲಿದೆ,”ಎಂದರು.
ಎಸ್‌ಎನ್‌ ಲೈಫ್‌ಸೈನ್ಸಸ್‌, ನಿಯೋಮ್‌ ಟೆಕ್ನಾಲಜಿಸ್‌ ಪ್ರೈವೇಟ್ ಲಿಮಿಟೆಡ್, ಹೈಬ್ರಿನೋಮಿಕ್ಸ್ ಲೈಫ್ ಸೈನ್ಸಸ್ ಅಂಡ್ ಡಯಾಗ್ನಾಸ್ಟಿಕ್ಸ್ ಎಲ್ಎಲ್ ಪಿ (ಎಚ್ಎಲ್ ಡಿ) ಹಾಗೂ ಗೆಲೊರಿ ಟಿಎಕ್ಸ್ ಫಾರ್ಮಾಸಿಟಿಕಲ್ಸ್ ಪ್ರವೈಟ್ ಲಿಮಿಟೆಡ್ ಕಂಪನಿಯವರು ತಮ್ಮ ಸಂಶೋಧನೆಗೆ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆಗಳನ್ನು ನೀಡಿದರು. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಬಿಬಿಸಿ ಎಂ.ಡಿ ಡಾ.ಜಿತೇಂದ್ರ ಕುಮಾರ್, ಡಾ.ಶರತ್ ಚಂದ್ರ, ವಿಶಾಲ ರಾವ್ ಸೇರಿದಂತೆ ಇತರ ವಿಜ್ಞಾನಿಗಳು ಹಾಜರಿದ್ದರು.

bangalore-start.up-company-covid-tests-five.minits-charge-Rs.150

ಸಭೆ ಬಳಿಕ‌ ಉಪ ಮುಖ್ಯಮಂತ್ರಿ ಯವರು ಸೆಂಟರ್ ಫಾರ್ ಹೂಮನ್ ಜೆನೆಟಿಕ್ಸ್ ಮತ್ತು ಬಯೊ ಇನ್ಫಾರ್ಮೇಟಿಕ್ಸ ಮತ್ತು ಅನ್ವಯಿಕ ಜೈವಿಕ ತಂತ್ರಜ್ಞಾನ ಸಂಸ್ಥೆ ಗೆ ಭೇಟಿ‌ ನೀಡಿ ಪ್ರಯೋಗಾಲಯಗಳನ್ನು ವೀಕ್ಷಿಸಿದರು.

key words : bangalore-start.up-company-covid-tests-five.minits-charge-Rs.150

 

ENGLISH SUMMARY : 

Deputy CM pats Startups working on Covid 19 solutions

As many as 45 startups at Bengaluru working on finding medicine, testing methods and vaccine for Covid 19

Bangalore : Deputy Chief Minister Dr C.N. Ashwath Narayan visited Bengaluru Bio Innovation Cetnre where 45 startups are working round the clock to find a vaccine, medicine and quick testing technology for the pandemic Covid 19.
He interacted with the young entrepreneurs and appreciated their efforts to find an affordable for finding a medicine, testing methods and vaccine the Covid 19 at the earliest. “I am glad that all startups here are working tirelessly to find a solution to the pandemic. Some are at clinical trial stage while a few have already applied for with the competent authorities for conducting tests,’’ the Deputy Chief Minister said.
Coordination Committee
To ensure proper coordination between the Companies and the government, the Deputy Chief Minister said that he would set up a coordination panel to ensure that the bio tech companies work more effectively. He directed Additional Chief Secretary (IT and BT) EV Ramana Reddy to constitute the committee.

Programmable Robot, Five minutes test and more:
The Deputy Chief Minister unveiled the Programmable Robot that would separate the Saliva from the swab in no time. The robot developed by S N Life Sciences has an ability to test eight different samples at a time, he said.
Dr Ashwath Narayan was impressed at the variety of innovations at the Bio Innovation Centre and encouraged the entrepreneurs.
“This is a great sign for Bengaluru, Karnataka and India,’’ he said adding that a quick solution will help to ensure a balance between life and livelihood.
He also appreciated the efforts Neuome Technologies Pvt Ltd which has a technology that enables on-the-spot testing within 5 minutes for asymptomatic as well as symptomatic cases.
He also visited the Centre for Human Genetics and Bio Informatics and inspected the lab there.