ಶಶಿಕಲಾಗೆ ಕೊರೊನಾ ಪಾಸಿಟಿವ್’ : ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸುವ ಸಾಧ್ಯತೆ…?

 

ಬೆಂಗಳೂರು, ಜ.22, 2021 : (www.justkannada.in news ) ತಮಿಳುನಾಡಿನ ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಗೆ ‘ಕೊರೊನಾ ಪಾಸಿಟಿವ್’ ದೃಢಪಟ್ಟ ಬೆನ್ನಲ್ಲೇ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎನ್ನಲಾಗಿದೆ.

jk

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಶಶಿಕಲಾ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಕರೆತಂದಿದ್ದ ಶಶಿಕಲಾರನ್ನು ಪರೀಕ್ಷಿಸಿದಾಗ ಕರೋನಾ ಇರುವುದು ಗುರುವಾರ ಸಂಜೆ ಧೃಡಪಟ್ಟಿತ್ತು.

bangalore-tamilnadu-shasikala-natarajan-plan-to- shift-private-hospital-sources

ಇದೀಗ ಶಶಿಕಲಾ ಆರೋಗ್ಯದಲ್ಲಿ ಮತ್ತಷ್ಟು ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ತೀವ್ರಾ ನಿಗಾದಲ್ಲಿ ಇರಿಸಲು ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಯ ತೀವ್ರಾ ನಿಗಾ ಘಟಕಕ್ಕೆ ಕರೆದೊಯ್ಯಲಾಗಿತ್ತು. ಆದರೆ ಶಶಿಕಲಾ ಸಂಬಂಧಿಕರು ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ, ಇದೀಗ ಶಶಿಕಲಾರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸದ್ಯದಲ್ಲೇ ಈ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.

 

key words : bangalore-tamilnadu-shasikala-natarajan-plan-to- shift-private-hospital-sources

 

posssibility of shifting Sasikala Natarajan to Manipal hospitals old airport road shortly.