ನವದೆಹಲಿ,ಸೆಪ್ಟಂಬರ್,18,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರಿನ ನಿವಾಸಿ ಗೌರವ್ ಎಂಬುವವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದ್ದಾರೆ. ತುರ್ತುವಿಚಾರಣೆಗೆ ಮುಖ್ಯನ್ಯಾಯಮೂರ್ತಿ ಬಿಆರ್ ಗವಾಯಿ ಒಪ್ಪಿಗೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ದಸರಾ ಉದ್ಘಾಟನೆಗೆ ಹಿಂದೂ ಅಲ್ಲದವರಿಗೆ ಆಹ್ವಾನ ನೀಡಿದ್ದಾರೆ. ಚಾಮುಂಡೇಶ್ವರಿ ದೇವಿ ಪೂಜೆಗೆ ಹಿಂದೂಯೇತರರಿಗೆ ಅವಕಾಶ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಗೌರವ್ ಉಲ್ಲೇಖಿಸಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಮೂವರು ಸಲ್ಲಿಸಿದ್ದ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು.
Key words: writer, Banu Mushtaq, inaugurate Dasara, Supreme Court