ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ನೀಡಲು ಚಿಂತನೆ: ಇಂದು ರಾತ್ರಿ 2ಗಂಟೆವರೆಗೂ ಮದ್ಯ ಮಾರಾಟಕ್ಕೆ ಅವಕಾಶ- ಸಚಿವ ಹೆಚ್. ನಾಗೇಶ್ ಹೇಳಿಕೆ…

ಬೆಂಗಳೂರು,ಡಿ,31,2019(www.justkannada.in):   ಇಂದು ಹೊಸ ವರ್ಷಾಚರಣೆ ಹಿನ್ನೆಲೆ ಮದ್ಯಪ್ರಿಯರಿಗೆ ಅಬಕಾರಿ ಸಚಿವ ಹೆಚ್ ನಾಗೇಶ್ ಸಿಹಿಸುದ್ದಿ ನೀಡಿದ್ದಾರೆ. ಇಂದು ರಾತ್ರಿ 2 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದಾರೆ.

ಈ ಬಗ್ಗೆ  ಮಾತನಾಡಿರುವ ಅಬಕಾರಿ ಸಚಿವ ಹೆಚ್. ನಾಗೇಶ್, ಹೊಸ ವರ್ಷದ ಹಿಂದಿನ ರಾತ್ರಿ ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು, ಆದರೆ, ಇದೀಗ ಸಿಎಲ್ 7 ಲೈಸನ್ಸ್ ಇರುವವರೆಗೆ 2 ಗಂಟೆ ಯವರೆಗೂ ಮದ್ಯ ಮಾರಾಟ ಮಾಡಲು ಅವಕಾಶ ನೀಡಿದೆ ಎಂದು ಹೇಳಿದರು.

ಬಡಜನರು ಬಳಸುವ ಮದ್ಯವನ್ನ ಸಬ್ಸಿಡಿ ದರದಲ್ಲಿ ಮದ್ಯ ನೀಡಲು ಸರ್ಕಾರ ಚಿಂತನೆ ನಡೆಸಿದೆ.   ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮದ್ಯ ಸರಬರಾಜು ಮಾಡಲು ಚಿಂತಿಸಲಾಗಿದೆ. ಈ ಸಂಬಂಧ ಯೋಜನೆ ರೂಪಿಸಲಾಗುತ್ತದೆ ಎಂದು ಸಚಿವ ಹೆಚ್. ನಾಗೇಶ್ ತಿಳಿಸಿದ್ದಾರೆ.

20,950 ಕೋಟಿ. ರೂ ರಾಜಸ್ವ ಸಂಗ್ರಹಿಸುವ ಗುರಿ ಇಟ್ಟಿಕೊಳ್ಳಲಾಗಿದೆ. ನವೆಂಬರ್ ಅಂತ್ಯದವರೆಗೆ ಒಟ್ಟು 14,400 ಕೋಟಿ ರೂ ಸಂಗ್ರಹವಾಗಿದೆ.  ಡಿಸೆಂಬರ್ ತಿಂಗಳಾಂತ್ಯಕ್ಕೆ 1700 ಕೋಟಿ ರೂಗಳಷ್ಟು ಸಂಗ್ರಹವಾಗಲಿದೆ ಎಂದು ಸಚಿವ ಹೆಚ್.ನಾಗೇಶ್ ತಿಳಿಸಿದರು.

Key words: bar – open- until -2pm- tonight-Minister -H.Nagesh.