ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ನ.15ರವರೆಗೆ ನ್ಯಾಯಾಂಗ ಬಂಧನ

ರಾಮನಗರ,ನವೆಂಬರ್,5,2022(www.justkannada.in): ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕಂಚಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಮೂವರು ಆರೋಪಿಗಳಿಗೆ ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣದ ಮೊದಲ ಆರೋಪಿ ಮೃತ್ಯಂಜಯ ಸ್ವಾಮೀಜಿ, 2ನೇ ಆರೋಪಿ ನೀಲಾಂಬಿಕೆ, 3ನೇ ಆರೋಪಿ ಮಹದೇವಯ್ಯಗೆ ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಾಗಡಿಯ 1ನೆ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.

ಮೃತ್ಯಂಜಯ ಸ್ವಾಮೀಜಿ ಮತ್ತು ಮಹದೇವಯ್ಯನನ್ನ ರಾಮನಗರ ಜೈಲಿಗೆ 2ನೇ ಆರೋಪಿ ನೀಲಾಂಬಿಕೆಯನ್ನ  ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

Key words:  Basavalinga Swamiji- suicide- case-three accused – judicial custody