ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ.

ರಾಮನಗರ,ಅಕ್ಟೋಬರ್,31,2022(www.justkannada.in): ಕಂಚುಗಲ್ ಬಂಡೆ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಮಾಗಡಿ 1ನೇ ಜೆಎಂಎಫ್ ಸಿ ಕೋರ್ಟ್ ಆದೇಶಿಸಿದೆ.

ಕಂಚುಗಲ್ ಬಂಡೆ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ , ನಿವೃತ್ತ ಶಿಕ್ಷಕ ಮಹಾದೇವಯ್ಯ  ವಿದ್ಯಾರ್ಥಿನಿ ನೀಲಾಂಬಿಕೆ ಅಲಿಯಾಸ್ ಚಂದುವನ್ನ ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.

ಮೂವರು ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ನೀಡಿ ಮಾಗಡಿ ತಾ 1ನೇ ಜೆಎಂಎಫ್ ಸಿ ಕೋರ್ಟ್ ನ್ಯಾಯಾಧೀಶೆ ಧನಲಕ್ಷ್ಮಿ ಆದೇಶ ಹೊರಡಿಸಿದ್ದಾರೆ.

ಮೃತ್ಯುಂಜಯ ಸ್ವಾಮೀಜಿ, ವಕೀಲ ಮಹದೇವಯ್ಯ ಅವರೊಂದಿಗೆ ಸೇರಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ಅಲಿಯಾಸ್  ಚಂದು ಎಂಬಾಕೆಯನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಖೆಡ್ಡಾ ತೋಡಿದ್ದರು ಎನ್ನಲಾಗಿದೆ.

Key words: Basavalinga Swamiji- suicide case-Three -accused – police custody – 6 days