Sunday, September 6, 2026

BDA Apartments

Home Front Page ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯನವರೇ 5 ವರ್ಷ ಸಿಎಂ- ಬಸವರಾಜ್ ರಾಯರೆಡ್ಡಿ

ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯನವರೇ 5 ವರ್ಷ ಸಿಎಂ- ಬಸವರಾಜ್ ರಾಯರೆಡ್ಡಿ

ಕೊಪ್ಪಳ,ಅಕ್ಟೋಬರ್,6,2025 (www.justkannada.in): ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ.  5 ವರ್ಷಗಳ ಕಾಲ  ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು  ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ತಿಳಿಸಿದರು.

ಕೊಪ್ಪಳದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ  ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ್ ರೆಡ್ಡಿ , ಉಳಿದ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ. ಮುಂದಿನ 2 ವರ್ಷ 8 ತಿಂಗಳು ಸಹ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಇರಲಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಸಿಎಂ ನೇತೃತ್ವದಲ್ಲಿ ನಾವು ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.

ಸಿದ್ದರಾಮಯ್ಯ ರಾಷ್ಟ್ರ ಕಂಡ ಧೀಮಂತ ನಾಯಕ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲ. ಹಾಗಾಗಿ ಉಳಿದ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ ಎಂದು ಬಸವರಾಜ್ ರಾಯರೆಡ್ಡಿ ತಿಳಿಸಿದರು.

Key words: Siddaramaiah, CM, 5 years,  Basavaraj Rayareddy