3ನೇ ಸಿಎಂ ಸನ್ನಿಹಿತ ಎಂಬ ಕಾಂಗ್ರೆಸ್ ಟೀಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು.

ಬೆಂಗಳೂರು,ಆಗಸ್ಟ್,11,2022(www.justkannada.in):  ರಾಜ್ಯದಲ್ಲಿ 3ನೇ ಸಿಎಂ ಸನ್ನಿಹಿತ ಎಂದು ಟೀಕಿಸಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ,  ಕಾಂಗ್ರೆಸ್ ವಿರುದ್ಧ ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡೋದು ಮೊದಲೇನಲ್ಲ. ಜನರು ನನ್ನ ಕೆಲಸದ ಬಗ್ಗೆ ನಂಬಿಕೆ ಇಟ್ಟಿದ್ದಾರೆ.  ಹೀಗಾಗಿ ಕಾಂಗ್ರೆಸ್ ನವರು ಹೇಳುವುದನ್ನ ಜನರು ನಂಬಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನವರ ಈ ಕೆಲಸಗಳಿಂದ ಮತ್ತಷ್ಟು ಗಟ್ಟಿಯಾಗುತ್ತೇನೆ. ಪಕ್ಷ ಸಂಘಟನೆ, ಜನರ ಬಳಿಗೆ ಹೋಗುತ್ತೇನೆ. ಕಾಂಗ್ರೆಸ್ ನವರ ಮಾತುಗಳಿಗೆ ಯಾವುದೇ ಆಧಾರ ಇಲ್ಲ. ಕಾಂಗ್ರೆಸ್ ಟ್ವಿಟ್ ಬಗ್ಗೆ ಹೆಚ್ಚು ಗಮನ ಹರಿಸಲ್ಲ. ಕಾಂಗ್ರೆಸ್ ನವರ ಮನಸ್ಸಿನಲ್ಲಿ ಅತಂತ್ರ ಇದೆ. ನಾನು ಸ್ಥಿತಪ್ರಜ್ಞನಾಗಿದ್ದೇನೆ. ಸತ್ಯ ಗೊತ್ತಿದೆ. ಇನ್ನೂ ಎರಡು ತಾಸು ಹೆಚ್ಚು ಕೆಲಸ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Key words: Basavaraja Bommai-Congress-criticism -3rd CM