ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎಂದಿದ್ದ ಕೆ.ಸಿ.ಚಂದ್ರಶೇಖರ್ ರಾವ್’ಗೆ ಬೊಮ್ಮಾಯಿ ತಿರುಗೇಟು

ಬೆಂಗಳೂರು, ಆಗಸ್ಟ್ 28, 2022 (www.justkannada.in): ತೆಲಂಗಾಣ ಸಿಎಂ ಕೆ.ಸಿ. ಚಂದ್ರಶೇಖರ್ ರಾವ್ ಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎಂದು ತೆಲಂಗಾಣ ಸಿಎಂ ಕೆ.ಸಿ. ಚಂದ್ರಶೇಖರ್ ರಾವ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ  ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಕೆ.ಸಿ. ಚಂದ್ರಶೇಖರ್ ರಾವ್ ಅವರು ಮೊದಲು ತೆಲಂಗಾಣವನ್ನು ಉದ್ದರಿಸಲಿ, ರಾಯಚೂರು ಅಷ್ಟೇ ಅಲ್ಲ, ರಾಜ್ಯದ ಒಂದಿಂಚೂ ಭೂಮಿಯನ್ನು ಬಿಟ್ಟುಕೊಡುವ ಮಾತೇ ಇಲ್ಲ. ತೆಲಂಗಾಣ ಸಿಎಂ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಹೇಳಿದ್ದಾರೆ.

ತೆಲಂಗಾಣ ಹಿಂದುಳಿದೆ ಎಂದು ಹೇಳಿ ಪ್ರತ್ಯೇಕ ರಾಜ್ಯ ಪಡೆದಿರುವ ಅವರು ಮುಖ್ಯಮಂತ್ರಿ ಆಗಿ ಅಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ತಮ್ಮ ಸಮಸ್ಯೆಗಳನ್ನು ಮುಚ್ಚಿಕೊಳ್ಳುವುದಕ್ಕಾಗಿ ಈ ರೀತಿ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.