ಮತ್ತೆ ಭರ್ತಿಯಾದ ಬಸವಸಾಗರ ಜಲಾಶಯ: ಕೃಷ್ಣಾನದಿ ಪಾತ್ರದಲ್ಲಿ ಪ್ರವಾಹ ಭೀತಿ.

ಯಾದಗಿರಿ,ಸೆಪ್ಟಂಬರ್,14,2021(www.justkannada.in):  ಯಾದಗಿರಿ ಜಿಲ್ಲೆ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯ ಮತ್ತೆ ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ಇದೀಗ ಕೃಷ್ಣಾನದಿಗೆ ನೀರು ಬಿಡಲಾಗಿದೆ.

ಮಳೆ ಹಿನ್ನೆಲೆ ಬಸವಸಾಗರ ಜಲಾಶಯ ಭರ್ತಿಯಾಗಿದ್ದು ಡ್ಯಾಂನಿಂದ ಕೃಷ್ಣಾನದಿಗೆ 1.1 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೃಷ್ಣಾನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಮಹಾರಾಷ್ಟ್ರ ಮತ್ತು ರಾಜ್ಯದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಕೃಷ್ಣಾನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದರು.

Key words: Basavasagar- Reservoir- filled- again- Flooding – Krishna river