ಡಿಸೆಂಬರ್ 31ರೊಳಗೆ ಬಿಬಿಎಂಪಿ  ಚುನಾವಣೆ ನಡೆಸಿ- ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ.

ಬೆಂಗಳೂರು,ಸೆಪ್ಟಂಬರ್,30,2022(www.justkannada.in): ಡಿಸೆಂಬರ್ 31ರೊಳಗೆ ಬಿಬಿಎಂಪಿ  ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಬಿಬಿಎಂಪಿ ವಾರ್ಡ್ ವಾರು ಮೀಸಲಾತಿ ಪಟ್ಟಿ ರದ್ಧುಪಡಿಸಿದ  ಹೈಕೋರ್ಟ್ , ರಾಜ್ಯ ಸರ್ಕಾರ ಒಬಿಸಿ ಆಯೋಗಕ್ಕೆ ಅಂತಕಿ ಅಂಶಗಳನ್ನ ಒದಗಿಸಬೇಕು ನವೆಂಬರ್ 30ರೊಳಗೆ ಮೀಸಲಾತಿ ಪ್ರಕಟಿಸಿ , ಡಿಸೆಂಬರ್ 31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ ಎಂದು ನಿರ್ದೇಶನ ನೀಡಿತು.

ಶೀಘ್ರವೇ ಚುನಾವಣೆ ನಡೆಸಲು ಸರ್ಕಾರ ಹಿಂದೆಟು ವಿಚಾರಕ್ಕೆ ಸಂಬಂಧಿಸಿದಂತೆ  ಅರ್ಜಿ ವಿಚಾರಣೆ ನಡೆಸಿತು. ಒಬಿಸಿ ಸೇರಿಸಿ ಹೊಸ ಮೀಸಲಾತಿ ಪಟ್ಟಿಗೆ ಕಾಲಾವಕಾಶ ಬೇಕು 16 ವಾರಗಳ ಕಾಲ ಕಾಲಾವಕಾಶ ನೀಡುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಅಫಿಡೆವಿಟ್ ಸಲ್ಲಿಸಿತು. ಸರ್ಕಾರದ ಪ್ರಮಾಣಪತ್ರಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.

Key words: BBMP-conduct-elections – December 31- High Court – Govt