ಗುತ್ತಿಗೆದಾರರಿಗೆ ಬಿಬಿಎಂಪಿ ಗುಡ್ ನ್ಯೂಸ್: ಬಾಕಿ ಹಣ ಬಿಡುಗಡೆ.

ಬೆಂಗಳೂರು,ಆಗಸ್ಟ್,22,2023(www.justkannada.in):  ಬಾಕಿ ಬಿಲ್ ಗೆ ಆಗ್ರಹಿಸಿ ಗುತ್ತಿಗೆದಾರರು ನಡೆಸಿದ್ದ ಹೋರಾಟಕ್ಕೆ ಬಿಬಿಎಂಪಿ ಮಣಿದಿದ್ದು, ಬಾಕಿ ಹಣ ಬಿಡುಗಡೆ ಮಾಡಿದೆ.

25 ಲಕ್ಷದೊಳಗೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ಬಾಕಿ ಹಣವನ್ನ ಬಿಬಿಎಂಪಿ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 42 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಸಣ್ಣ ಗುತ್ತಿಗೆದಾರರಿಗೆ ಬಿಲ್‌ ಕ್ಲಿಯರ್ ​​ಗೆ ಮೊದಲ ಹಂತದ ಹಣ ರಿಲೀಸ್ ಮಾಡಲಾಗಿದೆ. ತನಿಖಾ ವರದಿ ಬಂದ ಬಳಿಕ ಉಳಿದ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡಲಾಗುತ್ತೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬಾಕಿ ಬಿಲ್​ ಬಿಡುಗಡೆ ಮಾಡುವಂತೆ ಬಿಬಿಎಂಪಿ ಗುತ್ತಿಗೆದಾರರ ಸಂಘ ಆಗ್ರಹಿಸಿತ್ತು.  ಅಲ್ಲದೆ  ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿತ್ತು. ಈ ಹಿನ್ನೆಲೆಯಲ್ಲಿ  ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಒಟ್ಟು 57 ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Key words: BBMP -Good -News –Contractors-Dues -released