Saturday, September 19, 2026

BDA Apartments

ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು BDA JK_Adv BDA Adv
Home Front Page ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು.

ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು.

ಬೆಂಗಳೂರು,ಮೇ,10,2024 (www.justkannada.in): ತೆರಿಗೆ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಮಾಲ್ ​ಗಳಲ್ಲಿ ಒಂದಾದ ಮಂತ್ರಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಬೀಗ ಜಡಿದಿದ್ದಾರೆ.

ಈ ಹಿಂದೆಯೂ ಕೂಡ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ  ಹಲವು ಬಾರಿ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ್​ ಗೆ ಬಿಬಿಎಂಪಿ ಅಧಿಕಾರಿಗಳು ಈ ಬಾರಿ ಬಿಸಿ ಮುಟ್ಟಿಸಿದ್ದಾರೆ.

ಸುಮಾರು 50 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಂತ್ರಿ ಮಾಲ್​ನ ಲೈಸೆನ್ಸ್ ಅಮಾನತುಗೊಳಿಸಲಾಗಿದೆ ಎಂದು ಬೋರ್ಡ್ ಹಾಕಿ,  ಬಿಬಿಎಂಪಿ ಅಧಿಕಾರಿಗಳು ಸೀಜ್ ಮಾಡಿ ತೆರಳಿದ್ದಾರೆ ಎನ್ನಲಾಗಿದೆ.ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು mantri mal

ಈ ಹಿಂದೆಯೂ ಹಲವು ಬಾರಿ ಮಂತ್ರಿ ಮಾಲ್ ಗೆ ತೆರಿಗೆ ಹಣ ಪಾವತಿಸುವಂತೆ ಪಾಲಿಕೆ ಅಧಿಕಾರಿಗಳು ಸೂಚಿಸಿದ್ದರು. ನೋಟೀಸ್ ಕೂಡ ನೀಡಲಾಗಿತ್ತು. ಆದರೆ ಮಂತ್ರಿ ಮಾಲ್ ನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದು ತೆರಿಗೆ ವಿಭಾಗದ ಅಧಿಕಾರಿಗಳು ಮಾಲ್ ಸೀಜ್ ಮಾಡಿ ತೆರಳಿದ್ದಾರೆ ಎನ್ನಲಾಗಿದೆ.

Key words: BBMP, locked, Mantri Mall