ಸಿಎಂ ಬಿಎಸ್ ವೈ ನಿವಾಸದ ಬಳಿ ಇದ್ದ ಜಿಮ್ ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು…

ಬೆಂಗಳೂರು,ಫೆ,29,2020(www.justkannada.in):  ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದ ಬಳಿ ಇದ್ದ ಜಿಮ್ ಅನ್ನ ಬಿಬಿಎಂಪಿ ಅಧಿಕಾರಿಗಳು ಮುಚ್ಚಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದ ಬಳಿ ಇದ್ದ ಕಲ್ಟ್ ಫಿಟ್  ಫಿಟ್ನೆಸ್ ಸೆಂಟರ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ ಎನ್ನಲಾಗಿದೆ. ಕಲ್ಟ್ ಫಿಟ್  ಫಿಟ್ನೆಸ್ ಸೆಂಟರ್ ಮಧ್ಯರಾತ್ರಿವರೆಗೂ ಲೌಡ್ ಸ್ಪೀಕರ್ ಹಾಕಿ ಜನರಿಗೆ ಕಿರಿಕಿರಿ ಉಂಟುಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಕಲ್ಟ್ ಫಿಟ್  ಫಿಟ್ನೆಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ವೇಳೆ ಟ್ರೇಡ್ ಲೈಸೆನ್ಸ್ ಪಡೆಯದೆ ಜಿಮ್ ನಡೆಸುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಇದೀಗ ಜಿಮ್ ಮುಚ್ಚಿಸಿದ್ದಾರೆ ಎನ್ನಲಾಗಿದೆ.

Key words: BBMP- officers- lock -gym -near – CM BS yeddyurappa- residence.