Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಯುಎಇಯಲ್ಲಿ ಐಪಿಎಲ್ ಉಳಿದ ಪಂದ್ಯಗಳ ಆಯೋಜನೆಗೆ ಬಿಸಿಸಿಐ ಅಸ್ತು

ಯುಎಇಯಲ್ಲಿ ಐಪಿಎಲ್ ಉಳಿದ ಪಂದ್ಯಗಳ ಆಯೋಜನೆಗೆ ಬಿಸಿಸಿಐ ಅಸ್ತು

ಬೆಂಗಳೂರು, ಮೇ 30,2021 (www.justkannada.in): ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ಪೂರ್ಣಗೊಳಿಸಲು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ.

ಭಾರತದ ಇಂಗ್ಲೆಂಡ್ ಪ್ರವಾಸ ಮುಗಿದ ನಂತರ ಮತ್ತು ಟ್ವೆಂಟಿ-20 ಚಾಂಪಿಯನ್‌ಶಿಪ್ ಪ್ರಾರಂಭವಾಗುವ ಮೊದಲು ಐಪಿಎಲ್ ಉಳಿದ ಪಂದ್ಯಗಳ ಆಯೋಜನೆಗೆ ಬಿಸಿಸಿಐ ತೀರ್ಮಾನಿಸಿದೆ. ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚಿ ಸಲಾಗಿದೆ.

ಐಪಿಎಲ್ ಹದಿಮೂರನೇ ಆವೃತ್ತಿಯ ಪಂದ್ಯಾವಳಿಯ ಆತಿಥ್ಯ ವಹಿಸಿದ್ದ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯೊಂದಿಗೆ 14ನೇ ಆವೃತ್ತಿಯ ಉಳಿದ ಪಂದ್ಯಗಳ ಬಗ್ಗೆ ಚರ್ಚಿಸಲು ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ದುಬೈಗೆ ತೆರಳಿದ್ದಾರೆ.

ಈ ನಡುವೆ ಬಿಸಿಸಿಐ ದೇಶೀಯ ಕ್ರಿಕೆಟಿಗರ ಬಗ್ಗೆ ಹೆಚ್ಚು ಕಾಳಜಿ ವಹಿಸದಿರುವುದಕ್ಕೆಆಕ್ಷೇಪ ವ್ಯಕ್ತವಾಗುತ್ತಿದೆ.