ಯಾವುದೇ ಕಾರಣಕ್ಕೂ ಅವರು ಸಿಎಂ ಆಗಲು ನಾವು ಬಿಡಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಜುಲೈ,21,2022(www.justkannada.in): ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ನಲ್ಲಿ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಕಾಂಗ್ರಸ್ ಕೆಲ ನಾಯಕರು ಕನಸು ಕಾಣುತ್ತಿದ್ದಾರೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದ ರೀತಿ ನಾನು ಸಿಎಂ ಆಗ್ಬೇಕು.  ನಾನು ಸಿಎಂ ಆಗಬೇಕು ಎನ್ನುತಿದ್ದಾರೆ.  ಆದರೆ ಯಾವ ಕಾರಣಕ್ಕೂ ಅವರು ಸಿಎಂ ಆಗಲು ನಾವು ಬಿಡಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಮುಂದಿನ ಬಾರಿಯೂ ಬಿಜೆಪಿಯವರೇ ಸಿಎಂ ಆಗುತ್ತಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.  ಮತ್ತೆ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.

Key words: become-CM –congress-fight-Former CM-BS Yeddyurappa