Friday, September 25, 2026

BDA Apartments

Home Front Page ಸಿಎಂ ಆಗಲೆಂದು ಅರ್ಚಕರ ಸಂಕಲ್ಪ: ಅದರಲ್ಲಿ ತಪ್ಪೇನಿಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್

ಸಿಎಂ ಆಗಲೆಂದು ಅರ್ಚಕರ ಸಂಕಲ್ಪ: ಅದರಲ್ಲಿ ತಪ್ಪೇನಿಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್

ಕಾರವಾರ, ಮಾರ್ಚ್​,27, 2024 (www.justkannada.in): ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್  ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದು ಇಂದು ಗೋಕರ್ಣಕ್ಕೆ ತೆರಳಿದ್ದಾರೆ.

ಈ ನಡುವೆ ಇಂದು ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಡಿ.ಕೆ‌‌. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದ್ದು  ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್,  ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ  ಎಂದು ಹೇಳಿದ್ದಾರೆ.

ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. ಕೆಲವರು ನನ್ನನ್ನ ಸಿಎಂ ಆಗಲಿ ಎಂದು ಹೇಳುತ್ತಾರೆ. ಅವರ ಬಾಯಲ್ಲಿ ಬರುವುದನ್ನ ತಪ್ಪಿಸಲು ಸಾಧ್ಯವೇ? ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.ಸಿಎಂ ಆಗಲೆಂದು ಅರ್ಚಕರ ಸಂಕಲ್ಪ dks

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Key words: become, CM, DCM, DK Shivakumar