ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಕೇಸ್ : ವಾರ್ ರೂಮ್ ನ 17 ಸಿಬ್ಬಂದಿಗೆ ಗೇಟ್ ಪಾಸ್…

ಬೆಂಗಳೂರು,ಮೇ,5, 2021(www.justkannada.in): ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ ರೂಮ್ ನ 17 ಮಂದಿ ಸಿಬ್ಬಂದಿಗೆ ಗೇಟ್ ಪಾಸ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.jk

ದಂಧೆ ಪ್ರಕರಣ ಸಂಬಂಧ  ಬಿಬಿಎಂಪಿ ಪೋರ್ಟಲ್ ಮೂಲಕ ಬೆಡ್ ಬ್ಲಾಕಿಂಗ್ ಮಾಡುತ್ತಿದ್ದ,  ಬೆಡ್ ಬ್ಲಾಕಿಂಗ್ ನ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಬಿಬಿಎಂಪಿ ದಕ್ಷಿಣ ವಲಯದ ವಾರ್ ರೂಂ ನ 17 ಮಂದಿಗೆ ಗೇಟ್ ಪಾಸ್ ನೀಡಲಾಗಿದೆ. ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣವನ್ನ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು ಈ ಮಧ್ಯೆ ಇಬ್ಬರನ್ನ ಬಂಧಿಸಲಾಗಿದೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆಯನ್ನ ಬಯಲಿಗೆಳೆದಿದ್ದರು. ರೋನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚಾಗಿದ್ದು ಈ ಮಧ್ಯೆ ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್  ಮಾಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ  ಗಂಭೀರ ಆರೋಪ ಮಾಡಿದ್ದರು. bed blocking - Case –Bangalore-Gate pass - War Room- 17 staff

ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡಲಾಗುತ್ತಿದೆ ಎಂದು ಹೇಳಿದ್ದರು.

Key words: bed blocking – Case –Bangalore-Gate pass – War Room- 17 staff