Friday, August 7, 2026

BDA Apartments

Home Front Page ಗೋಮಾಂಸ ತಿನ್ನಬೇಕು ಅನ್ಸಿದ್ರೆ ತಿಂತಿನಿ, ಅದನ್ನ ಕೇಳೋಕೆ ಇವರ್ಯಾರು….? ಮತ್ತೆ ಬಿಜೆಪಿಗೆ ಕುಟುಕಿದ ಮಾಜಿ ಸಿಎಂ...

ಗೋಮಾಂಸ ತಿನ್ನಬೇಕು ಅನ್ಸಿದ್ರೆ ತಿಂತಿನಿ, ಅದನ್ನ ಕೇಳೋಕೆ ಇವರ್ಯಾರು….? ಮತ್ತೆ ಬಿಜೆಪಿಗೆ ಕುಟುಕಿದ ಮಾಜಿ ಸಿಎಂ ಸಿದ್ಧರಾಮಯ್ಯ…

ಮೈಸೂರು,ಜನವರಿ,13,2021(www.justkannada.in): ಇಲ್ಲಿಯವರೆಗೆ ನಾನು‌ ಗೋಮಾಂಸ ತಿಂದಿಲ್ಲ. ಆದ್ರೆ ತಿನ್ನಬೇಕು ಅನ್ಸಿದ್ರೆ ತಿಂತಿನಿ ಅದನ್ನ ಕೇಳೋಕೆ  ಇವರು ಯಾರು…? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೆ  ಗೋಮಾಂಸ ಸೇವನೆ ಕುರಿತು ಬಿಜೆಪಿಗೆ ಕುಟುಕಿದ್ದಾರೆ.jk-logo-justkannada-mysore

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿದ್ಧರಾಮಯ್ಯ,  ಆಹಾರ ನನ್ನ ಹಕ್ಕು ಅದನ್ನ ಪ್ರಶ್ನಿಸೋಕೆ ಇವರ್ಯಾರು. ಯಡಿಯೂರಪ್ಪಗೆ ಗೊತ್ತಿಲ್ಲ ಹೇಳ್ತಿನಿ ಕೇಳಿ. I am making it very clear ನಾನು ಈವರೆಗೆ ಗೋಮಾಂಸ ತಿಂದಿಲ್ಲ. ನಾನು ಹಂದಿ ಮಾಂಸ ತಿಂದಿಲ್ಲ. ಆದ್ರೆ ತಿನ್ನಬೇಕು ಅನ್ನಿಸಿದ್ರೆ ತಿನ್ನುತ್ತೀನಿ. ನಾನು ತಿಂದಿರೋದು ಕೋಳಿ ಮಾಂಸ, ಕುರಿಮಾಂಸ, ಆಡಿನ ಮಾಂಸ ಮಾತ್ರ. ಆದ್ರೆ ನಮ್ಮ ಆಹಾರ ಪದ್ದತಿ ಪ್ರಶ್ನಿಸುವ ಹಕ್ಕು ಇಲ್ಯಾರಿಗೂ ಇಲ್ಲ ಎಂದು ಟಾಂಗ್ ನೀಡಿದರು.

ಯಡಿಯೂರಪ್ಪ ಗೋಮಾಂಸ ತಿನ್ನೋದೆ ಸಾಧನೆ ಅಂತ ಹೇಳಿದ್ದಾನೆ. ಆದ್ರೆ ನಾನೇನು ಅವನ ಥರ ಸೊಪ್ಪು ತಿನ್ನಲೇ. ನಾನು ಸೊಪ್ಪು ಬೇಕು ಅಂದ್ರೆ ಸೊಪ್ಪು ತಿಂತಿನಿ. ಮಾಂಸ ಬೇಕು ಅಂದ್ರೆ ಮಾಂಸ ತಿಂತಿನಿ. ನಾನೇನಾದ್ರು ನಿಂಗೆ ಹೇಳಿದ್ದೀನಾ ಮಾಂಸ ತಿನ್ನು ಅಂತ?. ಮತ್ತೆ ಸುಮ್ಮನೆ ತಿನ್ನೋರಿಗೆ ಯಾಕೇ ಪ್ರಶ್ನೆ.  ಜಗತ್ತಿನಲ್ಲಿ ಮಾಂಸಹಾರಿಗಳೇ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಚೀನಾದಲ್ಲಿ‌ ನಾಲ್ಕು ಕಾಲಿನ ಮಂಚವೊಂದನ್ನ ಬಿಟ್ಟು ಇನ್ನೆಲ್ಲವನ್ನು ತಿಂತಾರೆ ಗೊತ್ತಾ ನಿಮಗೆ. ಹಾಗಾದ್ರೆ ಅಮೇರಿಕಾದಲ್ಲಿ ಇರೋರು ಪ್ರಾಣಿಗಳ..? ಇಂಗ್ಲೆಂಡ್, ಬ್ರಿಟನ್, ಸೇರಿದಂತೆ ಬೇರೆ ದೇಶದಲ್ಲಿರೋರು ದನ ತಿಂತಾರೆ. ಹಾಗಾದ್ರೆ ಅವರೇಲ್ಲ ಮನುಷ್ಯರಲ್ವಾ…? ಎಂದು ಪ್ರಶ್ನಿಸಿದರು.Beef – eat-Former CM –Siddaramaiah-outrage-BJP -again

ನಿಮಗೆ ಸೊಪ್ಪು ಇಷ್ಟ ಇದ್ರೆ ತಿನ್ನಿ. ಬೇರೆಯವರಿಗೆ ಏನು ಇಷ್ಟ ಇದೆ ಅದನ್ನ ತಿನ್ನೋಕೆ ಬಿಡಿ ಎಂದು ಸಿಎಂ ಬಿಎಸ್ ವೈ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

Key words: Beef – eat-Former CM –Siddaramaiah-outrage-BJP -again