ಜೂನ್ 28 ರೊಳಗೆ ಶಾಲಾರಂಭದ ಭವಿಷ್ಯ ಎಂದ ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜೂನ್ 26, 2021 (www.justkannada.in): ಜೂನ್ 28 ರೊಳಗೆ ಶಾಲೆ ಆರಂಭದ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಂಘ-ಸಂಸ್ಥೆಗಳೊಂದಿಗೆ ಸಭೆ ನಡೆಸಿದ ಸಚಿವರು, ಶಾಲೆ ಆರಂಭಿಸುವುದಕ್ಕಿಂತ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಜುಲೈ 1 ರಿಂದ ಶಾಲೆಗಳನ್ನು ಆರಂಭಿಸಬೇಕೇ? ಬೇಡವೇ? ಎಂಬುದರ ಬಗ್ಗೆ ಜೂನ್ 28 ರೊಳಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಶಾಲೆ ಆರಂಭಿಸುವ ಕುರಿತಂತೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಎಲ್ಲರ ಸಲಹೆ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.