ಬೆಳಗಾವಿ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುವೆ- ಸತೀಶ್ ಜಾರಕಿಹೊಳಿ ವಿಶ್ವಾಸ…

ಬೆಳಗಾವಿ,ಮಾರ್ಚ್,26,2021(www.justkannada.in): ಬೆಳಗಾವಿ ಉಪಚುನಾವಣೆಯಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲ್ಲುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.jk

ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಸತೀಶ್ ಜಾರಕಿಹೊಳಿಯ ಹೆಸರನ್ನ ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಿಸಿತು. ಬಳಿಕ ತಮ್ಮ ಸ್ಪರ್ಧೆ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಪಕ್ಷದ ನಿರ್ಧಾರ, ಆದೇಶಕ್ಕೆ ಬದ್ಧರಾಗಿರಬೇಕು. ಬೆಳಗಾವಿ ಉಪಚುನಾವಣೆಯಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲ್ಲುವೆ ಎಂದು ಹೇಳಿದರು.

ರಾಜ್ಯ ರಾಜಕಾರಣದಿಂದ ದೂರವಿಡಲು ಷಡ್ಯಂತ್ರ ನಡೆದಿದೆ ಎಂಬ ಅಭಿಮಾನಿಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ‘ನನ್ನ ವಿರುದ್ಧ ಯಾರೂ ಷಡ್ಯಂತ್ರ ಮಾಡಲಾಗುವುದಿಲ್ಲ. ಹೀಗಾಗಿ, ಯಮಕನಮರಡಿ ಕ್ಷೇತ್ರದ ಜನರು ಹಾಗೂ ಅಭಿಮಾನಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದರು. belagavi- by-election- will win-  Satish jarakiholi -Confidence.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು ವಿಚಾರ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಅದು ನನಗೆ ಸಂಬಂಧ ಪಟ್ಟ ವಿಚಾರ ಅಲ್ಲ. ಯುವತಿಗೆ ತೊಂದರೆಯಾಗಿದ್ದರೇ ದೂರು ನೀಡಲಿ ಎಂದರು.

Key words: belagavi- by-election- will win-  Satish jarakiholi -Confidence.