ತಾಯಿ ಚಾಮುಂಡೇಶ್ವರಿ ಮೇಲಾಣೆ: ನಾನು ಅಕ್ರಮ ಆಸ್ತಿ ಸಂಪಾದಿಸಿಲ್ಲ- ‘ಕೈ’ ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್…

ಬೆಳಗಾವಿ,ಅ,3,2019(www.justkannada.in):  ತಾಯಿ ಚಾಮುಂಡೇಶ್ವರಿ ಮೇಲೆ ಆಣೆ ಮಾಡುತ್ತೇನೆ. ನಾನು ಯಾವುದೇ ಅಕ್ರಮ ಆಸ್ತಿ ಸಂಪಾದಿಸಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹರ್ಷ ಶುಗರ್ಸ್ ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಕಾನೂನಿನ ಪ್ರಕಾರ ಎಲ್ಲವೂ ಆಗಿದೆ. ನನ್ನ ಬಳಿ ಯಾವುದೇ ಅಕ್ರಮ ಆಸ್ತಿ ಇಲ್ಲ. ತಾಯಿ ಚಾಮುಂಡೇಶ್ವರಿ ಮೇಲಾಣೆ ನಾನು ಅಕ್ರಮ ಆಸ್ತಿ ಸಂಪಾದಿಸಿಲ್ಲ. ಅಕ್ರಮ ಆಸ್ತಿ ಇದ್ದರೇ ಅದನ್ನ ಸರ್ಕಾರಕ್ಕೆ ಬರೆದು ಕೊಡುತ್ತೇನೆ ಎಂದು ತಿಳಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಮನ್ಸ್ ನೀಡಿ ವಿಚಾರಣೆ ನಡೆಸಿತ್ತು.

Key words: belagavi-lakshmi hebbalkar- chamundeshwari