ಬಳ್ಳಾರಿ,ಜನವರಿ,3,2026 (www.justkannada.in): ಬಳ್ಳಾರಿಯಲ್ಲಿ ಗಲಾಟೆ, ಫೈರಿಂಗ್ ಪ್ರಕರಣ ಸಂಬಂಧ ಪರಿಸ್ಥಿತಿ ನಿಯಂತ್ರಣದಲ್ಲಿದೆ ಯಾರನ್ನೂ ಬಂಧಿಸಿಲ್ಲ ಎಂದು ಬಳ್ಳಾರಿ ವಲಯ ಡಿಐಜಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ.
ಇಂದು ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿಗೆ ಡಿಐಜಿ ವರ್ತಿಕಾ ಕಟಿಯಾರ್ ಭೇಟಿ ನೀಡಿ ಮನೆಯ ಸುತ್ತ ಮುತ್ತಾ ಪರಿಶೀಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವರ್ತಿಕಾ ಕಟಿಯಾರ್ ಅವರು, ಪ್ರಕರಣ ತನಿಖೆ ನಡೆಯುತ್ತಿದೆ. ಯಾರನ್ನೂ ಬಂಧಿಸಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಿಷೇಧಾಜ್ಞೆ ಜಾರಿ ಮಾಡಿಲ್ಲ. ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಯಾವ ಸಮಸ್ಯೆಯೂ ಇಲ್ಲ ಎಂದು ತಿಳಿಸಿದ್ದಾರೆ.
Key words: Bellary, situation, control, DIG, Varthika Katiyar







