ಬೆಂಗಳೂರು,ಜನವರಿ,2,2026 (www.justkannada.in): ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ. ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಜನಾರ್ಧನ ರೆಡ್ಡಿ ಮತ್ತು ಅವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮದ ಬ್ಯಾನರ್ ಅಳವಡಿಕೆಯನ್ನೇ ನೆಪ ಮಾಡಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಅವರ ಬೆಂಬಲಿಗರು ದುಷ್ಕೃತ್ಯಕ್ಕೆ ಇಳಿದಂತಿದೆ ಎಂದು ಕಿಡಿಕಾರಿದ್ದಾರೆ.
ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕು. ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕು ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
Key words: Bellary riot case, BY Vijayendra, demands, security, investigation







