ಇಂಗ್ಲೆಂಡ್ ಟೀಂ ಕ್ಯಾಪ್ಟನ್ ಆಗಿದ್ದಕ್ಕೆ ಬೆನ್ ಸ್ಟ್ರೋಕ್ ಫುಲ್’ಖುಷ್ !

ಬೆಂಗಳೂರು, ಜುಲೈ 12, 2021 (www.justkannada.in): ಇಂಗ್ಲೆಂಡ್ ತಂಡದ ಕ್ರಿಕೆಟ್ ಆಟಗಾರ ಬೆನ್ ಸ್ಟ್ರೋಕ್ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಕ್ಕೆ ಫುಲ್ ಖುಷಿಯಾಗಿದ್ದಾರೆ.

14 ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕ್ಷೇತ್ರ ರಕ್ಷಣೆ ವೇಳೆ ಸ್ಟೋಕ್ಸ್ ಎಡಗೈ ತೋರು ಬೆರಳಿಗೆ ಗಾಯವಾಗಿತ್ತು. ಅದಾದ ಬಳಿಕ ಅವರು ಕೆಲಕಾಲ ಕ್ರಿಕೆಟ್ನಿಂದ ದೂರ ಉಳಿದಿದ್ದರು.

ಇದೀಗ ಉತ್ತಮ ಅವಕಾಶವೊಂದು ಅವರನ್ನು ಹುಡುಕಿಕೊಂಡು ಬಂದಿದೆ. ತನಗೆ ದೊರೆತ ಅವಕಾಶದ ಬಗ್ಗೆ ಸ್ಟೋಕ್ ಸಂತಸ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ವಿರುದ್ಧದ ಮೂರು ಏಕದಿನ ಸರಣಿಗೆ ನನ್ನನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಿರುವ ಇಂಗ್ಲೆಂಡ್ ತಂಡದ ಆಡಳಿತ ಮಂಡಳಿಯ ನಿರ್ಧಾರ ಕೇಳಿ ನನ್ನ ಪತ್ನಿ ಗೊಂದಲಕ್ಕೊಳಗಾಗಿದ್ದಳು ಎಂದು ಬೆನ್ ಸ್ಟೋಕ್ಸ್ ಹೇಳಿದ್ದಾರೆ.