ಪ.ಬಂಗಾಳದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಬಂಧನ.

ಕೊಲ್ಕತ್ತಾ,ಜುಲೈ,23,2022(www.justkannada.in): ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿಯನ್ನ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ವೇಳೆ ನಡೆದಿದ್ದ ಹಗರಣದಲ್ಲಿ ಪಾರ್ಥ ಚಟರ್ಜಿ ಅವರ ಹೆಸರು ಕೇಳಿಬಂದಿತ್ತು.  ಹಗರಣ ಸಂಬಂಧ ನಿನ್ನೆ  ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಕ್ಷಿಣ ಕೊಲ್ಕತ್ತಾದಲ್ಲಿರುವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರಿಗೆ ಸೇರಿದ ಕಟ್ಟಡದಲ್ಲಿ ಇಡಿ ಅಧಿಕಾರಿಗಳಿಗೆ  20 ಕೋಟಿ ರೂ. ನಗದು ಸಿಕ್ಕಿದೆ. ಈ ಹಣವನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಇದೀಗ  ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ಚಟರ್ಜಿ ಅವರನ್ನು ಅವರ ಮನೆಯಲ್ಲಿಯೇ ನಿನ್ನೆ ಯಿಂದ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.

Key words: Bengal –Education- Minister -Partha Chatterjee –arrested-ED