Sunday, August 23, 2026

BDA Apartments

Home Crime ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ  ಬಲೆಗೆ ಬಿದ್ದ ಬೆಸ್ಕಾಂ ಎಇಇ

ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ  ಬಲೆಗೆ ಬಿದ್ದ ಬೆಸ್ಕಾಂ ಎಇಇ

ಚಿತ್ರದುರ್ಗ,ಮಾರ್ಚ್,16,2023(www.justkannada.in): ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಎಇಇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ  ಬಲೆಗೆ ಬಿದ್ದ ಘಟನೆ ನಡೆದಿದೆ.

ಚಿತ್ರದುರ್ಗದ ಹೊಸದುರ್ಗದಲ್ಲಿ ಬೆಸ್ಕಾಂ ಎಎಇ ತಿರುಪತಿ ನಾಯ್ಕ್  ಎಂಬುವವರು ವಿದ್ಯುತ್ ಗುತ್ತಿಗೆದಾರರ ಬಳಿ ಸರ್ವೀಸ್  ಕನೆಕ್ಷನ್ ಗಾಗಿ 20 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ ಪಿ ವಾಸುದೇವ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಪರಿಶೀಲನೆ ನಡೆಸಿದ್ದಾರೆ.

Key words: Bescom -AEE – Lokayukta- trap – accepting -bribe