ಹೊಸದಿಲ್ಲಿ, ಮೇ 15, 2019 (www.justkannada.in): ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಿಯೆಟ್ನ ವರ್ಷದ ಅತ್ಯುತ್ತಮ ಅಂತರ್ರಾಷ್ಟ್ರೀಯ ಬ್ಯಾಟ್ಸ್ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದೇ ವೇಳೆ ಭಾರತದ ಜಸ್ಪ್ರೀತ್ ಬುಮ್ರಾ ವರ್ಷದ ಅತ್ಯುತ್ತಮ ಬೌಲರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಮಹಿಳಾ ವಿಭಾಗದಲ್ಲಿ ಸ್ಮತಿ ಮಂಧಾನಾ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಾಜಿ ಕ್ರಿಕೆಟಿಗ ಮೊಹಿಂದರ್ ಅಮರನಾಥ್ ಕ್ರೀಡಾಕ್ಷೇತ್ರದಲ್ಲಿ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಕೊಹ್ಲಿ ಐಸಿಸಿ ವರ್ಷದ ಕ್ರಿಕೆಟಿಗ, ಐಸಿಸಿ ಪುರುಷರ ಟೆಸ್ಟ್ ತಂಡದ ಆಟಗಾರ, ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ, ಐಸಿಸಿ ವರ್ಷದ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಎಂಬ ಪ್ರಶಸ್ತಿ ಪಡೆದಿದ್ದಾರೆ.






