2024ಕ್ಕೂ ಮೊದಲು ಅಮೆರಿಕಕ್ಕಿಂತ ಉತ್ತಮ ರಸ್ತೆ ನಿರ್ಮಾಣ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು, ಅಕ್ಟೋಬರ್ 9, 2022 (www.justkannada.in): 2024ರ ಮೊದಲು ರಾಜ್ಯದ ರಸ್ತೆಗಳನ್ನು ಅಮೆರಿಕಕ್ಕಿಂತ ಉತ್ತಮಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಇಂಡಿಯನ್ ರೋಡ್ ಕಾಂಗ್ರೆಸ್ 81 ನೇ ಅಧಿವೇಶನದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಚಿವರು ತಮ್ಮ ಭಾಷಣದಲ್ಲಿ ಉತ್ತರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ.

8,000 ಕೋಟಿ ಮೌಲ್ಯದ ರಸ್ತೆ ಯೋಜನೆಗಳನ್ನು ಉತ್ತರ ಪ್ರದೇಶಕ್ಕೆ ಉಡುಗೊರೆಯಾಗಿ ನೀಡಿದ್ದು, 2024 ರ ಮೊದಲು ರಾಜ್ಯದ ರಸ್ತೆಗಳನ್ನು ಅಮೆರಿಕಕ್ಕಿಂತ ಉತ್ತಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಮೋದಿ ಸರ್ಕಾರವು ಮುಂಬರುವ ದಿನಗಳಲ್ಲಿ ಯುಪಿಗೆ ಐದು ಲಕ್ಷ ಕೋಟಿ ರೂಪಾಯಿಗಳನ್ನು ಅನುಮೋದಿಸಲಿದೆ. ಪ್ರಸ್ತುತ ಎಂಟು ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನು ಇಂದು ನೀಡಲಾಗುತ್ತಿದೆ ಎಂದು ಗಡ್ಕರಿ ಹೇಳಿದ್ದಾರೆ.