ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ-ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಆಗಸ್ಟ್,15,2023(www.justkannada.in):  ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣನವರ 226 ನೇ ಜಯಂತೋತ್ಸವದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಆಗಸ್ಟ್ 15 ದೇಶದ ಸ್ವಾತಂತ್ರ್ಯ ದಿನ. ಇದೇ ದಿನ ಸಂಗೊಳ್ಳಿರಾಯಣ್ಣ ಅವರ ಜನ್ಮ ದಿನವೂ ಹೌದು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಅವರ ಆಶಯವೂ ಇದೇ ಆಗಿತ್ತು. ಆಗಸ್ಟ್ 15ಕ್ಕೆ ರಾಯಣ್ಣರ ಹುಟ್ಟು ದಿನವಾದರೆ, ಜನವರಿ 26 ಬ್ರಿಟಿಷರು ರಾಯಣ್ಣರನ್ನು ಗಲ್ಲಿಗೇರಿಸಿದ ದಿನ. ಈ ಎರಡೂ ದಿನಗಳೂ ದೇಶದ ಚರಿತ್ರೆಯಲ್ಲಿ ಪ್ರಮುಖವಾದ ದಿನ ಎಂದರು.

ಸರ್ವರಿಗೂ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ, ಧಾರ್ಮಿಕ ಸ್ವಾತಂತ್ರ್ಯ ಸಿಕ್ಕರೆ ಮಾತ್ರ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮರ ತ್ಯಾಗಕ್ಕೆ ಬೆಲೆ ಬರುತ್ತದೆ ಎಂದರು.

ರಾಯಣ್ಣರ ಹೆಸರಿನಲ್ಲಿ ಸೈನಿಕ ಶಾಲೆ, ಸಂಗೊಳ್ಳಿ ಹಾಗೂ ರಾಯಣ್ಣರನ್ನು ಗಲ್ಲಿಗೆ ಏರಿಸಿದ ಸ್ಥಳಗಳ ಅಭಿವೃದ್ಧಿಗಾಗಿ 280 ಕೋಟಿ ಅನುದಾನವನ್ನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ನೀಡಿ ಚಾಲನೆ ನೀಡಿದ್ದೆ. ಸದ್ಯದಲ್ಲೇ ನಾನೇ ಸೈನಿಕ ಶಾಲೆಯನ್ನು ಉದ್ಘಾಟಿಸುತ್ತೇನೆ ಎಂದರು.

ಪ್ರಜಾಪ್ರಭುತ್ವ ದೇಶ ನಿರ್ಮಿಸಬೇಕು ಎನ್ನುವುದು ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣರ ಆಶಯವಾಗಿತ್ತು. ಪ್ರಜಾಪ್ರಭುತ್ವ ಗಟ್ಟಿಗೊಳಿಸಿಕೊಳ್ಳುವುದು ಎಂದರೆ ನಮ್ಮ ಸಂವಿಧಾನವನ್ನು ಕಾಪಾಡಿಕೊಳ್ಳುವುದೇ ಆಗಿದೆ. ಈಗ ನಮ್ಮ ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ ದುಷ್ಟ ಶಕ್ತಿಗಳನ್ನು ಬೆಳೆಯಲು ಬಿಡಬಾರದು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಡುಮಾಮಡಿ ಮಠದ ವೀರಭದ್ರ ಚನ್ನಮಲ್ಲ ಮಹಾ ಸ್ವಾಮೀಜಿಗಳು, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಮಹಾ ಪೌರರಾದ ರಾಮಚಂದ್ರಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Key words: Beware – British- agents -insult -real freedom- fighters-CM Siddaramaiah

ENGLISH SUMMARY..

Protecting our constitution and democracy is the true way to honour Sangolli Rayanna

Beware of British agents who humiliate true freedom fighters Chief Minister Siddaramaiah

Bengaluru, August 15: We are the ones who handed over freedom fighter Sangolli Rayanna to the British, and even now there are agents of the British. They insult our true freedom fighters. Chief Minister Siddaramaiah gave a call to be careful about such people.

He spoke at the 226th birth anniversary of Krantiveera Sangolli Rayanna organized jointly by Krantiveera Sangolli Rayanna Foundation and Bruhat Bangaluru Mahanagara Corporation and garlanded the statue of Rayanna.

August 15 is the Independence Day of the country. This day is also Sangolli Rayanna’s birthday. This was also the aspiration of freedom fighter Sangolli Rayanna too. August 15 is Rayanna’s birthday, while January 26 is the day when the British hanged Rayanna. He said that both these days are important days in the history of the country.

He said that only if everyone gets social, political, economic and religious freedom, the sacrifice of freedom fighter martyrs will be worth it.

The CM said that he had granted Rs.280 crores for the development of the Sainik school in the name of Rayanna and also for the development of the Nandagad, where Rayanna was hanged, during his first tenure as CM. He said that he would inaugurate the Sainik School himself shortly.

Guerrilla fighter Sangollirayanna’s wish was to build a democratic country. Strengthening democracy means preserving our constitution. He said that we should not allow the evil forces to grow that they will change our constitution.

Deputy Chief Minister D.K Shivakumar, Veerabhadra Channamalla Maha Swamiji of Nidumamadi Mutt, Legislative Council Member Nagaraj Yadav, Chief Minister’s Political Adviser Govindaraj, former Minister HM Revanna, former Mayor Ramachandrappa and many other dignitaries were present.