ಅ.25 ರಂದು ಬಿಯೋಂಡ್ ಬೆಂಗಳೂರು ಸಮ್ಮಿಟ್ ಉದ್ಘಾಟನಾ ಸಮಾರಂಭ: ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್.

ಮೈಸೂರು,ಅಕ್ಟೋಬರ್,22,2021(www.justkannada.in):  ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಅಕ್ಟೋಬರ್ 25 ರಂದು ಬಿಯೋಂಡ್ ಬೆಂಗಳೂರು ಸಮ್ಮಿಟ್ ಉದ್ಘಾಟನಾ ಸಮಾರಂಭವನ್ನ ಆಯೋಜಿಸಲಾಗಿದೆ.

ಮೈಸೂರಿನ ರಾಡಿಸನ್ ಬ್ಲೂ, ನಲ್ಲಿ ಈ ಸಮಾರಂಭ ನಡೆಯಲಿದ್ದು ಮುಖ್ಯ ಅತಿಥಿಯಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದಾರೆ. ವಿಶೇಷ ಅತಿಥಿಯಾಗಿ ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಹಾಗೂ ಎಲೆಕ್ಟಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನದ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಆಗಮಿಸಲಿದ್ದು, ಐಟಿ ಬಿಟಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೈಸೂರು ಮಹಾನಗರ ಪಾಲಿಕೆ ಮೇಯರ್ ಸುನಂದ ಪಾಲನೇತ್ರ ಉಪಸ್ಥಿತರಿರಲಿದ್ದಾರೆ.

ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ್ ಪ್ರಸಾದ್, ಸುಮಲತಾ ಅಂಬರೀಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಸಾ.ರಾ ಮಹೇಶ್, ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಸ್.ನಾಗರಾಜ್, ಹೆಚ್.ವಿಶ್ವನಾಥ್, ಆರ್.ಧರ್ಮಸೇನಾ ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.

Key words: Beyond- Bangalore- Summit- Opening-Ceremony -october 25th-mysore