ಭದ್ರಾವತಿ ಕಬ್ಬಿಣ ಉಕ್ಕಿನ ಕಾರ್ಖಾನೆ ಮುಚ್ಚಲು ನಿರ್ಧಾರ: ಕೇಂದ್ರ ಸಚಿವ ಭಾಗವತ್.

ನವದೆಹಲಿ,ಫೆಬ್ರವರಿ,14,2023(www.justkannada.in): 105 ವರ್ಷಹಳೆಯದಾದ ಭದ್ರಾವತಿ ಕಬ್ಬಿಣ ಉಕ್ಕಿನ ಕಾರ್ಖಾನೆಯನ್ನ ಮುಚ್ಚಲು ನಿರ್ಧಾರ ಮಾಡಲಾಗಿದೆ ಎಂದು ಕೇಂದ್ರ ಸಚಿವ ಭಾಗವತ್ ತಿಳಿಸಿದ್ದಾರೆ.

ಈ ಬಗ್ಗೆ ಲೋಕಸಭೆಯಲ್ಲಿ ಮಾಹಿತಿ ನೀಡಿದ ಕೇಂದ್ರ ಸಚಿವ ಭಾಗವತ್,  ನಷ್ಟದ ಕಾರಣದಿಂದ ಭದ್ರಾವತಿ ಕಬ್ಬಿಣ ಉಕ್ಕಿನ ಕಾರ್ಖಾನೆಗೆ ಬೀಗ ಹಾಕಲು ನಿರ್ಧರಿಸಲಾಗಿದೆ.  ಕಾರ್ಖಾನೆ ಖರೀದಿಸಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಕಾರ್ಖಾನೆ ಮುಚ್ಚಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

105 ವರ್ಷ ಹಳೆಯ ಭದ್ರಾವತಿ ಕಬ್ಬಿಣ ಉಕ್ಕಿನ ಕಾರ್ಖಾನೆಯನ್ನ ಅಂದು ಸರ್.ಎಂ.ವಿಶ್ವೇಶ್ವರಯ್ಯ ಅವರ ಸಲಹೆ ಮೇರೆಗೆ ನಾಲ್ವಡಿ  ಕೃಷ್ಣರಾಜ ಒಡೆಯರ್ ಸ್ಥಾಪಿಸಿದ್ದರು.

Key words: Bhadravati -iron and steel factory- decided – close-Union Minister -Bhagwat.